Ad Widget .

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ| ವೇತನ ಹೆಚ್ಚಳ, ವಿಮೆ ಜಾರಿ ಘೋಷಣೆ

ಸಮಗ್ರ ವಾರ್ತೆ: ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ವಿಕಾಸಸೌಧದಲ್ಲಿ ಇಂದು (ಡಿ. 29) ಸುದ್ದಿಗೋಷ್ಠಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದರು.

Ad Widget . Ad Widget .

ಅತಿಥಿ ಉಪನ್ಯಾಸಕರ ಪ್ರತಿಭಟನೆ ಸಂಬಂಧ ಮಾತನಾಡಿದ ಸುಧಾಕರ್, ನಾವು ಅವರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಖಾಯಂ ಅವರ ಪ್ರಮುಖ ಬೇಡಿಕೆ ಆಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

Ad Widget . Ad Widget .

ವರ್ಕ್‌ಲೋಡ್ ಬಗ್ಗೆಯೂ ಸೂಚನೆ ನೀಡಲಾಗಿದೆ. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನ ಮಾಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ನೀಡಲಾಗುವುದು. ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುತ್ತೇವೆ. ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಇವರಿಗೆ ಕೃಪಾಂಕ ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ. ಅತಿಥಿ ಉಪನ್ಯಾಸಕರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಅತಿಥಿ ಉಪನ್ಯಾಸಕರು ಮುಷ್ಕರ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಈಗಾಗಲೇ ಮುಷ್ಕರದಿಂದ ತೊಂದರೆಯಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

Leave a Comment

Your email address will not be published. Required fields are marked *