ಸಮಗ್ರ ನ್ಯೂಸ್: ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗೃಹ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ಕೂರ್ಗ್ ಪಬ್ಲಿಕ್ ಶಾಲೆ ಮತ್ತು ಗೋಣಿಕೊಪ್ಪ ಪದವಿ ಪೂರ್ವ ಕಾಲೇಜು ಇವರ ಜಂಟಿ ಸಹಯೋಗದಲ್ಲಿ ‘ಕಾಶ್ಮೀರಿ ಯುವ ವಿನಿಮಯ’ ಕಾರ್ಯಕ್ರಮದ ಸಮಾರೋಪ ಸಮಾರಂಭವು ಡಿಸೆಂಬರ್, 31 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಕಣ್ಣೂರು ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಿ ಪೊನ್ನಂಪೇಟೆ ತಾಲೂಕು ಮಾಯಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ “ಎಲ್ಲೋ ಬ್ಯಾಂಬೂ” ರಿಸೋರ್ಟಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ. ಸಂಜೆ 4:30 ಗಂಟೆಗೆ ಆಗಮಿಸಿದ ರಾಜ್ಯಪಾಲರನ್ನು ಜಿಲ್ಲಾಧಿಕಾರಿ ವೆಂಕಟರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜು, ಹೆಚ್ಚುವರಿ ಪೊಲೀಸ ಅಧ್ಯಕ್ಷ ಸುಂದರ್ ರಾಜ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು. ಮಾಕುಟ್ಟ ಗಡಿಯಿಂದ ಎಲ್ಲೋ ಬ್ಯಾಂಬೂ ರೆಸಾರ್ಟಿಗೆ ಆಗಮಿಸುವವರೆಗೆ ಅವರು ಸಂಚರಿಸುವ ಮಾರ್ಗದ ವಾಹನ ಸಂಚಾರಗಳನ್ನು ನಿಲುಗಡೆಗೊಳಿಸಲಾಗಿತ್ತು. ನಾಳೆ ನಡೆಯುವ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಶಾಸಕ ಡಾ|| ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಇತರರು ಪಾಲ್ಗೊಳ್ಳಲಿದ್ದಾರೆ.