ಉಡುಪಿ: ನೇಜಾರು ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಚೌಗಲೆ ಜಾಮೀನು ಅರ್ಜಿ ತಿರಸ್ಕೃತ

ಸಮಗ್ರ ನ್ಯೂಸ್: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು(ಡಿ.30) ಆದೇಶ ನೀಡಿದೆ.

Ad Widget ... ..

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ಅರ್ಜಿಯನ್ನು ವಕೀಲ ಕೆ.ಎಸ್.ಎನ್.ರಾಜೇಶ್ ಮೂಲಕ ಸಲ್ಲಿಸಿದ್ದ. ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು.

Ad Widget

ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.

Leave a Comment

Your email address will not be published. Required fields are marked *