Ad Widget .

ಸಂಪಾಜೆ: ಜ. 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಮಗ್ರ ನ್ಯೂಸ್: ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ,ಬೆಂಗಳೂರು (ರಿ) ಆರೋಗ್ಯ ರಕ್ಷಾ ಸಮಿತಿ, ಸಂಪಾಜ ಹಾಗೂ ಗ್ರಾಮ ಪಂಚಾಯಿತಿ ಸಂಪಾಜೆ, ಬಾಲಂಬಿ, ಪೆರಾಜೆ, ಮದೆನಾಡು ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಭವ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜ. 2ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ.

Ad Widget . Ad Widget .

ಎಲ್ಲಾ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಿಳಿಸಿದ್ದಾರೆ.

Ad Widget . Ad Widget .

ತಜ್ಞ ವೈದ್ಯರು:- ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರಚಿಕಿತ್ಸಾ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಮಕ್ಕಳ ವಿಭಾಗ, ಕಣ್ಣಿನ ವಿಭಾಗ, ಕಿವಿ- ಮೂಗು ಮತ್ತು ಗಂಟಲು ವಿಭಾಗ, ಕೀಲು ಮತ್ತು ಮೂಳೆ ವಿಭಾಗ, ಚರ್ಮ ರೋಗ, ಮಾನಸಿಕ ಆರೋಗ್ಯ ವಿಭಾಗ, ಶ್ವಾಸಕೋಶ ವಿಭಾಗ

ಹೆಚ್ಚಿನ ಮಾಹಿತಿಗಾಗಿ 9008981023, 9008054201, 6363620731 ನ್ನು ಸಂಪರ್ಕಿಸಬಹುದಾಗಿದೆ.

Leave a Comment

Your email address will not be published. Required fields are marked *