ಸಮಗ್ರ ನ್ಯೂಸ್: ಕನ್ನಡ ನಾಮಫಲಕ ಸಂಬಂಧ ಕರವೇ ಕಾರ್ಯಕರ್ತರ ದಾಳಿ ಬೆನ್ನಲೆ ಮಾಲ್ ಆಪ್ ಏಷ್ಯಾ ಕ್ಲೋಸ್ ಮಾಡಲು ಆದೇಶ ಹೊರಡಿಸಲಾಗಿದೆ. ನಗರ ಪೊಲೀಸ್ ಕಮಿಷನರ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಜನವರಿ 15ರವರೆಗೆ ಮಾಲ್ ಆಫ್ ಏಷ್ಯಾ ಬಂದ್ ಆಗಲಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರಿನ ಯಲಹಂಕ ಹೋಬಳಿಯ ಬ್ಯಾಟರಾಯನಪುರದ ಬಳ್ಳಾರಿ ರಸ್ತೆಯ ಭಾಗದಲ್ಲಿ ಮಾಲ್ ಆಫ್ ಏಷ್ಯಾ ಇದೆ.
ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಮಾಲ್ ಮೇಲೆ ದಾಳಿ ನಡೆಸಿ ಪ್ರತಿಭಟನೆ ನಡೆಸಿತ್ತು. ಕರವೇ ಕಾರ್ಯಕರ್ತರು ಮಾಲ್ನೊಳಗೆ ನುಗ್ಗಿ ಗಲಾಟೆ ಮಾಡಿದ್ದರು. ಈ ಹಿನ್ನೆಲೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಡಿಸೆಂಬರ್ 31 ರಿಂದ ಜನವರಿ 15ರವರೆಗೆ ಮಾಲ್ ಆಫ್ ಏಷ್ಯಾ ಬಂದ್ ಮಾಡಿ ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಆದೇಶ ಹೊರಡಿಸಿದ್ದಾರೆ.
ಇನ್ನು ಮಾಲ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಹಾಕಲಾಗಿದೆ. ಮಾಲ್ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.