December 2023

ವೆನೆಜುವಲಾದಿಂದ ಬರಲಿದೆ ಕಚ್ಚಾ ತೈಲ

ಸಮಗ್ರ ನ್ಯೂಸ್: ಮೂರು ವರ್ಷಗಳ ಬಳಿಕ ವೆನೆಜುವಲಾದಿಂದ ಕಚ್ಚಾ ತೈಲ ಖರೀದಿಸಲು ಭಾರತ ಮುಂದಾಗಿದೆ. ಇದಕ್ಕೆ ಪೂರಕವಾಗಿ, ವೆನೆಜುವೆಲಾ ಸೇರಿದಂತೆ ನಿಬರ್ಂಧ ಇಲ್ಲದ ಯಾವುದೇ ದೇಶದಿಂದ ತೈಲ ಆಮದು ಮಾಡಿಕೊಳ್ಳಲು ಭಾರತ ಸಿದ್ಧ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡಾ ಹೇಳಿಕೆ ನೀಡಿದ್ದಾರೆ, ರಿಲಯನ್ಸ್ ಇಂಡಸ್ಟ್ರೀಸ್, ಇಂಡಿಯನ್ ಆಯಿಲ್ ಹಾಗೂ ಎಚ್‍ಪಿಸಿಎಲ್-ಮಿತ್ತಲ್ ಎನರ್ಜಿ ವೆನೆಜುವೆಲಾದ ತೈಲ ಖರೀದಿಸಿದ್ದು, ಇದು ಮುಂದಿನ ಎರಡು ತಿಂಗಳುಗಳಲ್ಲಿ ಭಾರತಕ್ಕೆ ಬರುವ ಸಾಧ್ಯತೆಯಿದೆ.

ವೆನೆಜುವಲಾದಿಂದ ಬರಲಿದೆ ಕಚ್ಚಾ ತೈಲ Read More »

ಶ್ರೀರಾಮಮಂದಿರ ಉದ್ಘಾಟನೆ/ ರಾಮ ಭಕ್ತರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿದ್ದು, ರಾಮಭಕ್ತರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡುವ ತಯಾರಿಯಲ್ಲಿದೆ. ಅಯೋಧ್ಯೆಗೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ದೇಶದ ವಿವಿಧ ಭಾಗಗಳಿಂದ ಒಂದು ಸಾವಿರ ವಿಶೇಷ ರೈಲುಗಳನ್ನು ಆರಂಭಿಸಲು ಇಲಾಖೆ ಯೋಜನೆ ರೂಪಿಸುತ್ತಿದೆ. ಈ ವಿಶೇಷ ರೈಲುಗಳನ್ನು ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಪುಣೆ, ಕೋಲ್ಕತ್ತಾ, ನಾಗುರ, ಲಕ್ಕೋ ಮತ್ತು ಜಮ್ಮು ಸೇರಿದಂತೆ ಪ್ರಮುಖ ನಗರಗಳಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸಲು ಬಳಸಲಾಗುತ್ತದೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಜ.19 ರಿಂದ ಈ ರೈಲುಗಳ ಸೇವೆ

ಶ್ರೀರಾಮಮಂದಿರ ಉದ್ಘಾಟನೆ/ ರಾಮ ಭಕ್ತರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ Read More »

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು/ ರಾಜ್ಯ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ‘ಗೃಹ ಜ್ಯೋತಿ’ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸಲಿದೆ. ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಬಹುದಾಗಿರು ವುದರಿಂದ, ಸರ್ಕಾರಿ

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು/ ರಾಜ್ಯ ಸರ್ಕಾರದಿಂದ ಆದೇಶ Read More »

ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್…ಕೇರಳದಲ್ಲಿ ಒಂದೇ ವಾರಕ್ಕೆ 825 ಕೇಸ್ ದಾಖಲು..!

ಸಮಗ್ರ ನ್ಯೂಸ್: ಕೊರೊನಾ ಕಾಟ ಮುಗಿತು ಅಂತ ಇಷ್ಟು ದಿನ ಆರಾಮವಾಗಿ ಇದ್ದ ಜನರಿಗೆ ಈಗ ಮತ್ತೆ ರಾಜ್ಯದಲ್ಲಿ ಕೋವಿಡ್ ಆತಂಕ ಶುರುವಾಗಿದೆ. ಇಷ್ಟು ದಿನ ಸೈಲೆಂಟ್ ಇದ್ದ ಕೊರೊನಾ ಈಗ ಮತ್ತೆ ರೂಪ ಬದಲಿಸಿ ಆರ್ಭಟಿಸಲು ಶುರುವಾಗಿದೆ. ರಾಜ್ಯಕ್ಕೆ ಓಮಿಕ್ರಾನ್‍ನ ಉಪ ತಳಿಯಾದ ಜೆಎನ್.1 ಆತಂಕ ಹೆಚ್ಚಾಗಿದೆ. ಕೇರಳದಲ್ಲಿ ಕೊರೊನಾ ಹಾವಳಿ ಇದೀಗ ಶುರುವಾಗಿದೆ.ನಿನ್ನೆ ಒಂದು ದಿನ 237 ಪ್ರಕರಣ ದಾಖಲಾಗಿದೆ. ಈ ಮೊದಲ ವಾರವೆ 825 ಕೇಸ್ ದಾಖಲಾಗಿದ್ದು. ಒಟ್ಟು ಪ್ರಕರಣಗಳ ಪೈಕಿ 90%

ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್…ಕೇರಳದಲ್ಲಿ ಒಂದೇ ವಾರಕ್ಕೆ 825 ಕೇಸ್ ದಾಖಲು..! Read More »

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ‌ ಕಡಬ ಸಮೀಪದ ಕಳಾರದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕನನ್ನು ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ , ಕಡಬದ ಸರಸ್ವತಿ ವಿದ್ಯಾ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಚಂದ್ರಶೇಖರ ಮತ್ತು ಅವರ ಇನ್ನೋರ್ವ ಪುತ್ರಿಗೆ ಗಂಭೀರ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರಸ್ವತಿ ಶಾಲೆಯಲ್ಲಿ ನಿನ್ನೆ ಕ್ರೀಡೋತ್ಸವ ಮತ್ತು ವಾರ್ಷಿಕೋತ್ಸವವಿದ್ದು

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು Read More »

ಮಂಗಳೂರು: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಕಳ್ಳತನ| ಅರೇಬಿಕ್ ಶಿಕ್ಷಕರ 2.18 ಲಕ್ಷಕ್ಕೆ ಕನ್ನ ಹಾಕಿದ ಖದೀಮರು

ಸಮಗ್ರ ನ್ಯೂಸ್: ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ಸಂದರ್ಭದಲ್ಲಿ ಅರೇಬಿಕ್‌ ಶಾಲೆಯ ಅಧ್ಯಾಪಕರ ₹ 2.18 ಲಕ್ಷ ಕಳವಾದ ಬಗ್ಗೆ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಭಟ್ಕಳದಿಂದ ಇಲ್ಲಿಗೆ ಡಿ. 9ರಂದು ಬಂದಿದ್ದ ಅಬ್ದುಲ್ ಹಮೀದ್ ಎಂಬುವರು ನಗರದ ಹಂಪನಕಟ್ಟೆ ಬಳಿಯ ನೂರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಈ ಸಂದರ್ಭ ₹ 2,18,480 ಇದ್ದ ಪ್ಲಾಸ್ಟಿಕ್‌ ಚೀಲವನ್ನು ಪ್ರಾರ್ಥನಾ ಕೊಠಡಿಯಲ್ಲಿರುವ ಕುರಾನ್ ಇಡುವ ಕಪಾಟಿನ ಬಳಿ ಇಟ್ಟಿದ್ದರು. ಪ್ರಾರ್ಥನೆ ಮುಗಿಸಿ ತಾವು ಟೀಚರ್ ಆಗಿ ಕೆಲಸ ಮಾಡುತ್ತಿರುವ

ಮಂಗಳೂರು: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಕಳ್ಳತನ| ಅರೇಬಿಕ್ ಶಿಕ್ಷಕರ 2.18 ಲಕ್ಷಕ್ಕೆ ಕನ್ನ ಹಾಕಿದ ಖದೀಮರು Read More »

ಸುಬ್ರಹ್ಮಣ್ಯ: ಮಂಗಗಳ ಕಳೇಬರ ಪತ್ತೆ ಪ್ರಕರಣ| ವಿಷ ನೀಡಿ ಕೊಂದಿರುವ ಶಂಕೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಬಳ್ಪ ಸಮೀಪದ ಕಾಡಿನಲ್ಲಿ ಮಂಗಗಳ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ತ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವಿಷ ನೀಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಬಳ್ಪ–ಕಮಿಲ ರಸ್ತೆಯ ಸಮೀಪ ಕಾಡಿನಲ್ಲಿ ಮೂವತ್ತಕ್ಕೂ ಹೆಚ್ಚು ಮಂಗಗಳ ಶವ ಗುರುವಾರ ಮುಂಜಾನೆ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ಬಳಿಕ ಗುತ್ತಿಗಾರು ಪಶು ವೈದ್ಯಾಧಿಕಾರಿ ಡಾ| ವೆಂಕಟಾಚಲಪತಿ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಈ

ಸುಬ್ರಹ್ಮಣ್ಯ: ಮಂಗಗಳ ಕಳೇಬರ ಪತ್ತೆ ಪ್ರಕರಣ| ವಿಷ ನೀಡಿ ಕೊಂದಿರುವ ಶಂಕೆ Read More »

ಸುಳ್ಯ: ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ| ಪಿಕಪ್ ಚಾಲಕ ಸಾವು

ಸಮಗ್ರ ನ್ಯೂಸ್: ಪಿಕಪ್‌ ವಾಹನ ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು, ಸಹ ಚಾಲಕ ಅವರನ್ನು ಆಸ್ಪತ್ರೆಗೆ ಕರೆ ತರುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಸಮೀಪದ ಪೈಚಾರ್ ನಲ್ಲಿ ಡಿ.14ರ ರಾತ್ರಿ ಸಂಭವಿಸಿದೆ. ಮೃತರನ್ನು ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು.

ಸುಳ್ಯ: ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ| ಪಿಕಪ್ ಚಾಲಕ ಸಾವು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಸುಳಿವು ನೀಡುವವರಿಗೆ ಬಹುಮಾನ ಘೋಷಿಸಿದ ಎನ್ಐಎ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳ ಕುರಿತಂತೆ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕುರಿತಂತೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಎನ್‌ಐಎ, ಆರೋಪಿಗಳ ಬಂಧನಕ್ಕೆ ಅಗತ್ಯವಾದ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು.ಜೊತೆಗೆ, ಮಾಹಿತಿದಾರರ ವಿವರವನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ. 15ನೇ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಮೊಹಮ್ಮದ್ ಮುಸ್ತಫಾ, 16ನೇ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಸುಳಿವು ನೀಡುವವರಿಗೆ ಬಹುಮಾನ ಘೋಷಿಸಿದ ಎನ್ಐಎ Read More »

“ಸ್ತ್ರೀ ಶಕ್ತಿ ಸಂಘಮಮ್”/ ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ

ಸಮಗ್ರ ನ್ಯೂಸ್: ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯು ಅಂಗೀಕಾರಗೊಂಡಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಜ.2ರಂದು ಕೇರಳ ಬಿಜೆಪಿ ಘಟಕವು ‘ಸ್ತ್ರೀ ಶಕ್ತಿ ಸಂಘಮಮ್’ ಎನ್ನುವ ಬೃಹತ್ ಸಮಾವೇಶವನ್ನು ಆಯೋಜಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪಕ್ಷದ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಉದ್ಯಮಿಗಳು, ಮನರೇಗಾ ಕಾರ್ಮಿಕರು ಮತ್ತು

“ಸ್ತ್ರೀ ಶಕ್ತಿ ಸಂಘಮಮ್”/ ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ Read More »