December 2023

ಸಂಘ ಕಾರ್ಯಾಲಯಕ್ಕೆ ಪ್ರವೇಶ ನಿರಾಕರಣೆ/ ಗೂಳಿಹಟ್ಟಿ ಶೇಖರ್ ಹೇಳಿಕೆಗೆ ಆರ್‍ಎಸ್‍ಎಸ್ ಸ್ಪಷ್ಟನೆ

ಸಮಗ್ರ ನ್ಯೂಸ್: ನಾಗಪುರದ ಸ್ವಯಂ ಸೇವಕ ಸಂಘದ ಹೆಡಗೇವಾರ್ ವಸ್ತುಸಂಗ್ರಹಾಲಯಕ್ಕೆ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ನೀಡಿದ ಹೇಳಿಕೆಗಳ ಕುರಿತಾಗಿ ಆರ್‍ಎಸ್‍ಎಸ್ ಸ್ಪಷ್ಟನೆ ನೀಡಿದ್ದು, ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯಿಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲ ಆರೋಪ ಎಂದು ಹೇಳಿದೆ. ಈ ಹೇಳಿಕೆಯ ಹಿನ್ನಲೆಯಲ್ಲಿ ಆರ್‍ಎಸ್‍ಎಸ್ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಆರ್‍ಎಸ್‍ಎಸ್‍ನ ಎಲ್ಲಾ ಕಛೇರಿಗಳಲ್ಲಿ […]

ಸಂಘ ಕಾರ್ಯಾಲಯಕ್ಕೆ ಪ್ರವೇಶ ನಿರಾಕರಣೆ/ ಗೂಳಿಹಟ್ಟಿ ಶೇಖರ್ ಹೇಳಿಕೆಗೆ ಆರ್‍ಎಸ್‍ಎಸ್ ಸ್ಪಷ್ಟನೆ Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಮೀಸಲಾತಿ/ ಲೋಕಸಭೆಯಲ್ಲಿ ಇಂದು ಐತಿಹಾಸಿಕ ಬಿಲ್ ಮಂಡನೆ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಇಂದು ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದ ಎರಡು ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ಈ ಪೈಕಿ ಮೀಸಲಾತಿ ವಿಚಾರದ ಕುರಿತು ಐತಿಹಾಸಿಕ ಮಸೂದೆಯನ್ನು ಕೇಂದ್ರ ಮಂಡಿಸಿದೆ. ಈ ಮಸೂದೆಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕಾಶ್ಮೀರಿ ಪಂಡಿತರು ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಗೆ ಸೀಟು ಕಾಯ್ದಿರಿಸಿದೆ. ಮೀಸಲಾತಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದು ಜಮ್ಮ ಕಾಶ್ಮೀರ ವಿಧಾನಸಭೆಯಲ್ಲಿ ಇಬ್ಬರು ಕಾಶ್ಮೀರ ಪಂಡಿತರ ಮಹಿಳೆ ಸೇರಿ ಹಾಗೂ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಮೀಸಲಾತಿ/ ಲೋಕಸಭೆಯಲ್ಲಿ ಇಂದು ಐತಿಹಾಸಿಕ ಬಿಲ್ ಮಂಡನೆ Read More »

ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡುವ ಭಕ್ತಾದಿಗಳಿಗೆ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಮಣ್ಯ. ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯ ಪ್ರವಾಸ ಕೈಗೊಳ್ಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದಿದೆ. ದೇವಾಲಯಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ. ಮಹಾತೋಭಾರ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ, ಸುಬ್ರಮಣ್ಯ, ಕಡಬ ತಾಲೂಕು

ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡುವ ಭಕ್ತಾದಿಗಳಿಗೆ ಮಹತ್ವದ ಸೂಚನೆ Read More »

ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 32ನೇ ಸ್ಥಾನ ಪಡೆದಿದ್ದಾರೆ. ಎಚ್ಸಿಎಲ್ ಕಾರ್ಪೊರೇಷನ್ ಸಿಇಒ ರೋಶ್ನಿ ನಾಡರ್ ಮಲ್ಹೋತ್ರಾ (60 ನೇ ಸ್ಥಾನ), ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಅಧ್ಯಕ್ಷೆ ಸೋಮಾ ಮೊಂಡಲ್ (70 ನೇ ಸ್ಥಾನ) ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ (76 ನೇ ಸ್ಥಾನ) ಪಟ್ಟಿಯಲ್ಲಿ ಸ್ಥಾನ ಪಡೆದ ಇತರ ಮೂವರು ಭಾರತೀಯ ಮಹಿಳೆಯರು. ಯುರೋಪಿಯನ್ ಕಮಿಷನ್ ಮುಖ್ಯಸ್ಥೆ ಉರ್ಸುಲಾ

ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್ Read More »

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ/ ಸಾವಿರಾರು ಗಣ್ಯರು ಭಾಗಿಯಾಗುವ ನಿರೀಕ್ಷೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ 2024ರ ಜನವರಿಯಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದ್ದು, ಜನವರಿ 22 ರಂದು ರಾಮಲಲ್ಲಾನ ವಿಗ್ರಹದ ಪ್ರತಿಷ್ಠಾಪನೆ ಅಯೋಧ್ಯೆಯ ರಾಮಮಂದಿರದಲ್ಲಿ ಮಾಡಲಾಗುತ್ತದೆ ಎಂದು ಖಚಿತಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ದೇಶಾದ್ಯಂತ 8 ಸಾವಿರ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದ್ದು, ವಿರಾಟ್ ಕೊಹ್ಲಿ, ಅಮಿತಾಬ್, ಪ್ರಸಿದ್ಧ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಸಚಿನ್

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ/ ಸಾವಿರಾರು ಗಣ್ಯರು ಭಾಗಿಯಾಗುವ ನಿರೀಕ್ಷೆ Read More »

ಹುತಾತ್ಮ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡೋದಕ್ಕೆ ಸಿಎಂ- ತೇಜಸ್ವಿ ಸೂರ್ಯ ಜಟಾಪಟಿ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗಿನ ಹೋರಾಟದಲ್ಲಿ ಹುತಾತ್ಮರಾಗಿದ್ದ ಯೋಧ ಕ್ಯಾಪ್ಟನ್ ಪ್ರಾಂಜಲ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ವಾರ್ ನಡೆಸಿದ್ದಾರೆ.ಪ್ರಾಂಜಲ್ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ನೀಡಿದೆ. ಇನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಯೋಧರೊಬ್ಬರು ತೀರಿಕೊಂಡು 12 ದಿವಸಗಳಾದರೂ ನಿಮ್ಮ ಸರ್ಕಾರದ ಯಾರೊಬ್ಬ ಅಧಿಕಾರಿಯೂ ಸಂಪರ್ಕಿಸದೇ ಇದ್ದಿದ್ದು ಸತ್ಯ ಅಂತ ತೇಜಸ್ವಿ ಸೂರ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು.

ಹುತಾತ್ಮ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡೋದಕ್ಕೆ ಸಿಎಂ- ತೇಜಸ್ವಿ ಸೂರ್ಯ ಜಟಾಪಟಿ Read More »

ಇಂದು ಅಂಬೇಡ್ಕರ್ ಮಹಾಪರಿನಿರ್ವಾಣ ದಿನ/ಅಂಬೇಡ್ಕರ್ ಎಂಬ ನಾವು ಮರೆತ ಅದ್ಭುತ ರಾಷ್ಟ್ರಪ್ರೇಮಿ

ವಿಶೇಷ ಲೇಖನ: ಕುಮಾರ್ ಶೇಣಿ ಸಮಗ್ರ ನ್ಯೂಸ್: ಅದು 25 ನವೆಂಬರ್ 1949. 2 ವರ್ಷ, 11 ತಿಂಗಳು, 18 ದಿನಗಳ ಪರಿಶ್ರಮಕ್ಕೆ ಪ್ರತಿಫಲವಾಗಿ ಸ್ವತಂತ್ರ ಭಾರತಕ್ಕೆ ಸಂವಿಧಾನವೊಂದು ಸಿದ್ಧಗೊಂಡಿತ್ತು. ಸಂವಿಧಾನ ಕರ್ತೃ ಎಂದೇ ಹೆಸರಾದ ಡಾ. ಬಿ. ಆರ್ ಅಂಬೇಡ್ಕರ್ ಸಂವಿಧಾನ ಸಮಿತಿಯ ಮುಂದೆ ಕೊನೆಯ ಮಾತುಗಳನ್ನಾಡಲು ನಿಂತುಬಿಟ್ಟಿದ್ದರು. ಎರಡಕ್ಕೂ ಅಧಿಕ ವರ್ಷಗಳ ಸಂವಿಧಾನ ನಿರ್ಮಾಣದ ಇತಿಹಾಸ, ಅದಕ್ಕೆ ಪರಿಶ್ರಮಪಟ್ಟವರ ನೆನಪು ಮಾಡಿಕೊಳ್ಳುತ್ತಾ ಕೊನೆಗೆ ಭವಿಷ್ಯದ ಭಾರತದ ಕುರಿತು ಮಾತನಾಡುತ್ತಾ, “1950ರ ಜನವರಿ 26ರಂದು ಭಾರತವೂ

ಇಂದು ಅಂಬೇಡ್ಕರ್ ಮಹಾಪರಿನಿರ್ವಾಣ ದಿನ/ಅಂಬೇಡ್ಕರ್ ಎಂಬ ನಾವು ಮರೆತ ಅದ್ಭುತ ರಾಷ್ಟ್ರಪ್ರೇಮಿ Read More »

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ನಡೆದಿದೆ.ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ (ಡಿ.5) ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಡಿ. 6ರಂದು ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬoದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳಿಗೆ ಹಾನಿಯಾಗಿದ್ದು, ರಾತ್ರಿ ವೇಳೆ

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ Read More »

ಕಾಫಿತೋಟದ ಮ್ಯಾನೇಜರ್ ಮೇಲೆ ಕಾಡುಕೋಣ ದಾಳಿ

ಸಮಗ್ರ ನ್ಯೂಸ್: ಕಾಡುಕೋಣ ದಾಳಿಯಿಂದ ಕಾಫಿತೋಟದ ಮ್ಯಾನೇಜರ್ ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಗ್ರಾಮದಲ್ಲಿ ದ.4 ರಂದು ಮಧ್ಯಾಹ್ನ ನಡೆದಿದೆ. ಸಾರಗೋಡು ಗ್ರಾಮದ ಎಸ್.ಟಿ. ಸುರೇಂದ್ರಗೌಡ ಎಂಬುವರ ಹಲಸೂರು ಎಸ್ಟೇಟ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸೋಮವಾರ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲ್ವಿಚಾರಣೆ ಮಾಡಲು ತೆರಳಿದ್ದಾಗ ಎಸ್ಟೇಟ್ ಮ್ಯಾನೇಜರ್ ಸುನಿಲ್ ಅವರ ಮೇಲೆ ಕಾಡುಕೋಣ ದಾಳಿಮಾಡಿದೆ ಎಂದು ತಿಳಿದುಬಂದಿದೆ. ಹಲಸೂರು ಎಸ್ಟೇಟ್ ಗೆ ಎಲೆಕ್ಟ್ರೀಕ್ ಬೇಲಿ ಇದ್ದರೂ ಸಹ ಅದನ್ನು

ಕಾಫಿತೋಟದ ಮ್ಯಾನೇಜರ್ ಮೇಲೆ ಕಾಡುಕೋಣ ದಾಳಿ Read More »

ಅರಣ್ಯಾಧಿಕಾರಿಗಳ ಮೇಲೆ ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಹರೀಶ್ ಪೂಂಜಾ| ಎಫ್ಐಆರ್ ವಾಪಾಸ್ಸಿಗೆ ಬಿಜೆಪಿ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣವನ್ನು ಬಿಜೆಪಿ ಶಾಸಕ ಹರೀಶ್​​ ಪೂಂಜಾ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಆದರೆ ಈ ವೇಳೆ ಬರಗಾಲ ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಯು.ಟಿ.ಖಾದರ್​​ ಹೇಳಿದ್ದಾರೆ. ಅವಕಾಶ ನೀಡದ್ದಕ್ಕೆ ಸಿಟ್ಟಿಗೆದ್ದ ಶಾಸಕ ಪೂಂಜಾ ಸದನದ ಬಾವಿಗಿಳಿದು ಜೆಡಿಎಸ್​, ಬಿಜೆಪಿ ಸದಸ್ಯರಿಂದ ಪ್ರತಿಭಟನೆ ಮಾಡಿದ್ದಾರೆ. ಬಳಿಕ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಸ್ಪೀಕರ್ ಖಾದರ್ ಅವಕಾಶ ನೀಡಿದ್ದು,​ ಬಳಿಕ ವಿಪಕ್ಷ ಸದಸ್ಯರು ಧರಣಿ ಹಿಂಪಡೆದಿದ್ದಾರೆ.

ಅರಣ್ಯಾಧಿಕಾರಿಗಳ ಮೇಲೆ ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಹರೀಶ್ ಪೂಂಜಾ| ಎಫ್ಐಆರ್ ವಾಪಾಸ್ಸಿಗೆ ಬಿಜೆಪಿ ಆಗ್ರಹ Read More »