December 2023

ನಾಳೆ(ಡಿ.3) ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ

ಸಮಗ್ರ ನ್ಯೂಸ್: ಹೊಸ ರೇಷನ್ ಕಾರ್ಡ್ ಗೆ ಡಿಸೆಂಬರ್.3ರಂದು ರಾಜ್ಯಾಧ್ಯಂತ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ರೇಷನ್ ಕಾರ್ಡ್ ತಿದ್ದುಪಡಿಗಾಗಿ ನ.29ರ ಹಾಗೂ ನ.30ರವರೆಗೆ ಎರಡು ದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಅವಕಾಶ ನೀಡಲಾಗಿತ್ರು. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ […]

ನಾಳೆ(ಡಿ.3) ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ Read More »

ಡಿ.4ರಿಂದ ಸಂಸತ್ ನ ಚಳಿಗಾಲದ ಅಧಿವೇಶನ| ಇಂದು ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಸಮಗ್ರ ನ್ಯೂಸ್: ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇಂದು(ಡಿ.2) ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ(ಡಿ.3) ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಒಟ್ಟು ೧೫ ದಿನಗಳ ಕಲಾಪ ನಡೆಯಲಿದ್ದು, ಡಿಸೆಂಬರ್ ೨೨ರಂದು ಅಧಿವೇಶನ ಮುಕ್ತಾಯಗೊಳ್ಳಲಿದೆ. ಸಂಸತ್ತಿನಲ್ಲಿ ರಚನಾತ್ಮಕ ಚರ್ಚೆ ನಡೆಸಲು

ಡಿ.4ರಿಂದ ಸಂಸತ್ ನ ಚಳಿಗಾಲದ ಅಧಿವೇಶನ| ಇಂದು ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ Read More »

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್​ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್​ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ Read More »

Health Tips|ಚಳಿಗಾಲದ ಸೂಪರ್ ಫುಡ್ ಬಿಳಿ ಎಳ್ಳು

ಸಮಗ್ರ ನ್ಯೂಸ್: ಚಳಿಗಾಲದಲ್ಲಿ ಕೆಲವು ಪದಾರ್ಥಗಳನ್ನು ಸೇವಿಸುವುದು ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಈ ಪದಾರ್ಥಗಳಲ್ಲಿ ಒಂದು ಎಳ್ಳು, ಇದನ್ನು ಚಳಿಗಾಲದ ಸೂಪರ್ ಫುಡ್ ಎಂದು ಕರೆಯಲಾಗುತ್ತದೆ. ಎಳ್ಳು ಶೀತದ ದಿನಗಳಲ್ಲಿ ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ ಮತ್ತು ಅನೇಕ ರೋಗಗಳನ್ನು ದೂರ ಮಾಡುತ್ತದೆ. ಚಳಿಗಾಲದಲ್ಲಿ ಎಳ್ಳನ್ನು ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಎಳ್ಳಿನಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಕಂಡುಬರುತ್ತದೆ. ಇದು ಮೂಳೆ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ನಾರಿನಂಶವಿರುವ ಎಳ್ಳನ್ನು ಸೇವಿಸುವುದರಿಂದ ಮಲಬದ್ಧತೆ ಮತ್ತು ಅಜೀರ್ಣ ಸಮಸ್ಯೆಯೂ

Health Tips|ಚಳಿಗಾಲದ ಸೂಪರ್ ಫುಡ್ ಬಿಳಿ ಎಳ್ಳು Read More »

ಎಡಗೈಗೆ ಸಿರಿಂಜ್ ಚುಚ್ಚಿದ ಸ್ಥಿತಿಯಲ್ಲಿ ಮೃತದೇಹ‌ ಪತ್ತೆ| ಡಾ|| ಸತೀಶ್ ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ. ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ. ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸಮೀಪದ ಕೊಣಸೂರು ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶುಕ್ರವಾರ ಕೂಡ ಕೊಣಸೂರು ಆಸ್ಪತ್ರೆಗೆ ಆಗಮಿಸಿದ್ದು ಅಲ್ಲಿಂದ ಪಿರಿಯಾಪಟ್ಟಣಕ್ಕೆ ಆಗಮಿಸಿದ್ದಾರೆ. ಅಲ್ಲಿಂದ ಮಡಿಕೇರಿಯತ್ತ ತಮ್ಮ‌ ಕಾರಿನಲ್ಲಿ‌ ಆಗಮಿಸಿರುವ ವೈದ್ಯರ‌ ಮೃತದೇಹ

ಎಡಗೈಗೆ ಸಿರಿಂಜ್ ಚುಚ್ಚಿದ ಸ್ಥಿತಿಯಲ್ಲಿ ಮೃತದೇಹ‌ ಪತ್ತೆ| ಡಾ|| ಸತೀಶ್ ಸಾವಿನ ಸುತ್ತ ಅನುಮಾನದ ಹುತ್ತ Read More »

ಹುಸಿಬಾಂಬ್ ಬೆದರಿಕೆ ಹಿನ್ನಲೆ| ಇಂದು ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಡಿಸಿ

ಸಮಗ್ರ ನ್ಯೂಸ್: ಹುಸಿ ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ. ನಗರದ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ ಎನ್ನುವುದು ಖಚಿತವಾಗಿರುವ ಹಿನ್ನೆಲೆ ಶನಿವಾರ ಶಾಲೆಗಳಿಗೆ ರಜೆ ಇರುವುದಿಲ್ಲ. ಬೆಂಗಳೂರಿನ ಎಲ್ಲಾ ಶಾಲೆಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ದಯಾನಂದ್ ಸ್ಪಷ್ಟಪಡಿಸಿದ್ದಾರೆ. 60ಕ್ಕೂ ಹೆಚ್ಚು ಶಾಲೆಗಳಿಗೆ ಮೇಲ್ ಬಂದಿವೆ. ಯಾವ ರೀತಿಯ ಆತಂಕ ಪಡುವಂತಿಲ್ಲ. ನಾವು ಶಾಲೆಗೆ ರಜೆ ನೀಡಿಲ್ಲ. ಯಾವುದೇ ತುರ್ತು ಅನಿವಾರ್ಯತೆ

ಹುಸಿಬಾಂಬ್ ಬೆದರಿಕೆ ಹಿನ್ನಲೆ| ಇಂದು ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಡಿಸಿ Read More »

ಇಂದಿನಿಂದ ಪ್ರೋ ಕಬಡ್ಡಿ ಕಲರವ| ಎರಡು ತಿಂಗಳು ಭರಪೂರ ಮನರಂಜನೆ

ಸಮಗ್ರ‌ ನ್ಯೂಸ್: ಇಂದಿನಿಂದ ಬಹುನಿರೀಕ್ಷಿತ ವಿವೋ ಪ್ರೊ ಕಬಡ್ಡಿ ಲೀಗ್‌ ಸೀಸನ್‌ 10ರ ಹವಾ ಶುರುವಾಗಲಿದೆ. ಇಂದು ಪ್ರೊ ಕಬಡ್ಡಿ ಪಂದ್ಯಾವಳಿಗಳಿಗೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಸ್ಟೇಡಿಯಂನಲ್ಲಿ ಮೊದಲಿಗೆ ತೆಲುಗು ಟೈಟನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ. ಈ ರೋಚಕ ಪಂದ್ಯಾವಳಿಯ ಆರಂಭದಲ್ಲೇ ಸ್ಟಾರ್ ಆಟಗಾರರಾದ ಫಜೆಲ್ ಅತ್ರಾಚಲಿ ಮತ್ತು ಪವನ್ ಸೆಹ್ರಾವತ್ ಮುಖಾಮುಖಿಯಾಗಲಿದ್ದು, ಕುತೂಹಲ ಕೆರಳಿಸಿದೆ. ಸದ್ಯ 4 ವರ್ಷಗಳ ನಂತರ ಆರಂಭವಾಗಿರುವ ಪ್ರೊ ಕಬಡ್ಡಿ ಲೀಗ್‌ನ 10ನೇ ಸೀಸನ್‌ನಲ್ಲಿ ಎಲ್ಲಾ 12

ಇಂದಿನಿಂದ ಪ್ರೋ ಕಬಡ್ಡಿ ಕಲರವ| ಎರಡು ತಿಂಗಳು ಭರಪೂರ ಮನರಂಜನೆ Read More »

ಸುಳ್ಯ: ಕನಕದಾಸ ಜಯಂತಿ ಆಚರಣೆಯ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದ ಎಂ ವೆಂಕಪ್ಪ ಗೌಡ

ಸಮಗ್ರ ನ್ಯೂಸ್: ರಾಷ್ಟೀಯ ಹಬ್ಬಗಳ ದಿನಾಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯನ್ನು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನ.30 ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ನಗರ ಪಂಚಾಯತ್ ಸದಸ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡರು ಮಾತನಾಡಿ ಸರಕಾರಿ ಕಾರ್ಯಕ್ರಮಗಳನ್ನು ಆಚರಿಸಲು ಕೆಲವೊಂದು ನಿಯಮಗಳಿವೆ. ಸ್ಥಳೀಯ ಜನಪ್ರತಿನಿಧಿಗಳನ್ನು, ಸಾಮಾಜಿಕ ಮುಖಂಡರುಗಳನ್ನು ಕರೆದು ಕಾರ್ಯಕ್ರಮ ನಡೆಸಬೇಕು. ಅಲ್ಲದೆ ಸರಕಾರಿ ಕಚೇರಿಗಳು, ಸಭಾಭವನ ಇದೆ ಅದರಲ್ಲಿ ಮಾಡಬೇಕು. ಆದರೆ ಇಂದಿನ

ಸುಳ್ಯ: ಕನಕದಾಸ ಜಯಂತಿ ಆಚರಣೆಯ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದ ಎಂ ವೆಂಕಪ್ಪ ಗೌಡ Read More »

ಮಿಜೋರಾಂ ವಿಧಾನಸಭಾ ಚುನಾವಣೆ/ ಡಿಸೆಂಬರ್ 4ಕ್ಕೆ ಮುಂದೂಡಿದ ಮತ ಎಣಿಕೆ

ಸಮಗ್ರ ನ್ಯೂಸ್: ಪಂಚರಾಜ್ಯಗಳ ಪೈಕಿ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಡಿಸೆಂಬರ್ 3ರಿಂದ ಡಿಸೆಂಬರ್ 4ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಡ ಮತ್ತು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಭಾನುವಾರವೇ ಹೊರಬೀಳಲಿದೆ. ಮಿಜೋರಾಂ ರಾಜ್ಯದಲ್ಲಿ ಕ್ರೈಸ್ತ ಸಮುದಾಯವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಭಾನುವಾರ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದ್ದು, ಆ ದಿನ ವಿಶೇಷ ಪ್ರಾರ್ಥನೆ ನಡೆಯಲಿದೆ. ಹೀಗಾಗಿ ವಿವಿಧ ವಲಯಗಳಿಂದ ಬಂದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು

ಮಿಜೋರಾಂ ವಿಧಾನಸಭಾ ಚುನಾವಣೆ/ ಡಿಸೆಂಬರ್ 4ಕ್ಕೆ ಮುಂದೂಡಿದ ಮತ ಎಣಿಕೆ Read More »

ವಾಯುಪಡೆಯಲ್ಲಿ 317 ಹುದ್ದೆಗಳು/ ಡಿಸೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯಲ್ಲಿ ಎನ್‍ಸಿಸಿ ವಿಶೇಷ ಪ್ರವೇಶ ಮೂಲಕ 317 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಡಿಸೆಂಬರ್ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪದವಿ, ಬಿ.ಇ/ಬಿ.ಟೆಕ್, ಸಿಎ, ಪಿಯುಸಿ, ವಿದ್ಯಾರ್ಹತೆ ಜೊತೆಗೆ ಕನಿಷ್ಟ 20 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ತಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ವಾಯುಪಡೆಯಲ್ಲಿ 317 ಹುದ್ದೆಗಳು/ ಡಿಸೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಿ Read More »