December 2023

2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆ/ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್: 2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 4ರವರೆಗೆ ವಿಸ್ತರಿಸಲಾಗಿದೆ. 2024ರ ಜನವರಿ 24 ರಿಂದ ಫೆಬ್ರವರಿ 01ರ ನಡುವೆ 2024ರ ಜೆಇಇ ಮೇನ್ಸ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ನವೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, ಡಿಸೆಂಬರ್ 4ರೊಳಗೆ ಅರ್ಜಿ ಸಲ್ಲಿಸಬಹುದು. ಬಿಇ, ಬಿ.ಟೆಕ್, ಬಿ.ಆರ್ಚ್, ಬಿ ಪ್ಲಾನಿಂಗ್ ಕೋರ್ಸ್‍ಗಳ […]

2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆ/ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ Read More »

ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ/ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2024ರ ಮಾರ್ಚ್ 02ರಿಂದ ಮಾರ್ಚ್ 22ರ ವರೆಗೆ ಮತ್ತು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ 2024ರ ಮಾರ್ಚ್ 25 ರಿಂದ ಏಪ್ರಿಲ್ 06ರ ವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದೆ. ಈ ವೇಳಾಪಟ್ಟಿ ಕುರಿತಾಗಿ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 15ರ ವರೆಗೆ

ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ/ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಹೆಚ್ಚುತ್ತಿರುವ ವಾಯುಮಾಲಿನ್ಯ/ ಸಿಲಿಕಾನ್ ಸಿಟಿಯಲ್ಲಿ ಆರಂಭಗೊಂಡ ಊಬರ್ ಗ್ರೀನ್

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟಿಕ್ ವಾಹನ ‘ಊಬರ್ ಗ್ರೀನ್’ ಸೇವೆಯನ್ನು ಪ್ರಾರಂಭಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಉಬರ್ ಗ್ರೀನ್‍ಗೆ ಚಾಲನೆ ನೀಡಲಾಗಿದೆ. ನ.30ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮಿಟ್ 2023ರಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಉಬರ್ ಗ್ರೀನ್‍ಗೆ ಚಾಲನೆ ನೀಡಿದ್ದಾರೆ. ಈ ಸೇವೆಯಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಊಬರ್ ಗ್ರೀನ್ ವಾಹನದಲ್ಲಿ ಪ್ರಯಾಣ ಮಾಡಲಿದ್ದಾರೆ. ಇಂದಿನಿಂದಲೇ ಮಧ್ಯ

ಹೆಚ್ಚುತ್ತಿರುವ ವಾಯುಮಾಲಿನ್ಯ/ ಸಿಲಿಕಾನ್ ಸಿಟಿಯಲ್ಲಿ ಆರಂಭಗೊಂಡ ಊಬರ್ ಗ್ರೀನ್ Read More »

ಪುತ್ತೂರು: ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ಯೋಗ ಪಟು ಮೇಘನಾ ರೈ ಹೆಸರು ದಾಖಲು

ಸಮಗ್ರ ನ್ಯೂಸ್: ನಿರಂತರ ಯೋಗ ಕೇಂದ್ರ ಪುತ್ತೂರು ತಾಲೂಕು ಇದರ ಯೋಗ ಪಟು ಮೇಘನಾ ರೈ ಪರಿವೃತ್ತ ಪದ್ಮಸಾನದಲ್ಲಿ 01 ಗಂಟೆ 08 ನಿಮಿಷ ಒಂದೇ ಸ್ಥಿತಿ ಯಲ್ಲಿ ಇರುವ ಮೂಲಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ದಾಖಲಿಸಿಕೊಂಡಿದ್ದಾರೆ. ಇವರು ಪುತ್ತೂರು ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಪುತ್ತೂರು ಕಂಬಳ ಕೊಡಿ ವಿಜಯ ಕುಮಾರ್ ರೈ ಮತ್ತು ಸಂಧ್ಯಾ. ಕೆ. ಆರ್. ಅವರು ಪುತ್ರಿ. ಯೋಗ ಗುರು

ಪುತ್ತೂರು: ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ಯೋಗ ಪಟು ಮೇಘನಾ ರೈ ಹೆಸರು ದಾಖಲು Read More »

ಸುಳ್ಯ: ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮಡಿಕೇರಿ ಮೂಲದ ವ್ಯಕ್ತಿಯೋರ್ವರು ಸುಳ್ಯ ಸಮೀಪದ ಅರಂಬೂರಿನ ಹೊಳೆಯಲ್ಲಿ ವ್ಯಕ್ತಿಯು ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಮೊಣ್ಣಂಗೇರಿಯ ವೆಂಕಟರಮಣ ಎಂದು ಗುರುತಿಸಲಾಗಿದೆ. ಅರಂಬೂರು ಸಮೀಪ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಎರಡನೇ ಮೊಣ್ಣಂಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂಬವರು ಹೊಳೆಯಲ್ಲಿ ನಾಪತ್ತೆಯಾಗಿದ್ದರು. ಇವರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ತೀವ್ರ ಹುಡುಕಾಟದ ಬಳಿಕವೂ ಪತ್ತೆಯಾಗದ ಕಾರಣ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡ ಆಗಮಿಸಿದ್ದು, ಮುಳುಗಿದ್ದ ವ್ಯಕ್ತಿಯ ಮೃತದೇಹವನ್ನು ಹೊರ ತೆಗೆಯುವಲ್ಲಿ

ಸುಳ್ಯ: ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು Read More »

ಕುಶಾಲನಗರ: ಕಾರಿನಲ್ಲಿ ಹೆಣವಾಗಿ ಪತ್ತೆಯಾದ ವೈದ್ಯ

ಸಮಗ್ರ ನ್ಯೂಸ್: ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಮೃತ ದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಡಾ| ಸತೀಶ್ (47)ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಈ ಬಗ್ಗೆಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕುಶಾಲನಗರ: ಕಾರಿನಲ್ಲಿ ಹೆಣವಾಗಿ ಪತ್ತೆಯಾದ ವೈದ್ಯ Read More »

ಮೆಡಿಕಲ್ ಆಫೀಸರ್ ಆಗಬೇಕಾ? ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 56,000 ಸಂಬಳ!

ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಡಿಸೆಂಬರ್ 2, 2023 ಅಂದರೆ ನಾಳೆ ಸುರತ್ಕಲ್​​ನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಸರ್ಕಾರಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಮೆಡಿಕಲ್ ಆಫೀಸರ್ ಆಗಬೇಕಾ? ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 56,000 ಸಂಬಳ! Read More »

ಡಿಗ್ರಿ ಪಾಸ್​ ಆಗಿದ್ಯಾ? ಈ ಉದ್ಯೋಗಕ್ಕೆ ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 42,000 ಸಂಬಳ!

ಸಮಗ್ರ ಉದ್ಯೋಗ: Silk Growers Farmers Service Co-operative Society Karnataka Recruitment 2023 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಅಸಿಸ್ಟೆಂಟ್ & ಸೇಲ್ಸ್​ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಕೆಗೂ

ಡಿಗ್ರಿ ಪಾಸ್​ ಆಗಿದ್ಯಾ? ಈ ಉದ್ಯೋಗಕ್ಕೆ ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 42,000 ಸಂಬಳ! Read More »

ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ/ ದುಬೈನಲ್ಲಿ ಮೋದಿ

ಸಮಗ್ರ ನ್ಯೂಸ್: ವಿಶ್ವಸಂಸ್ಥೆಯ ಕಾನ್ಸರೆನ್ಸ್ ಆಫ್ ಪಾರ್ಟೀಸ್ (ಸಿಒಪಿ-28) ಜತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದುಬೈ ಪ್ರವಾಸ ಕೈಗೊಂಡಿದ್ದಾರೆ. ‘ಸಿಒಪಿ-28 ಶೃಂಗಸಭೆಯಲ್ಲಿ ಭಾಗವಹಿಸಲು ದುಬೈಗೆ ಬಂದಿಳಿದಿದ್ದೇನೆ. ಸಭೆಯ ಕಾರ್ಯಕಲಾಪಗಳನ್ನು ಎದುರು ನೋಡುತ್ತಿದ್ದೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಯುಎಇ ಉಪ ಪ್ರಧಾನಿ ಶೇಖ್ ಸೈಫ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ಅವರನ್ನು ದುಬೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ದುಬೈನಲ್ಲಿರುವ ಭಾರತೀಯ ಸಮುದಾಯದವರು ಪ್ರಧಾನಿ

ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ/ ದುಬೈನಲ್ಲಿ ಮೋದಿ Read More »

ವಿದೇಶಿ ಆತಿಥ್ಯ ಸ್ವೀಕಾರ/ ಸಂಸದರಿಗೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ

ಸಮಗ್ರ ನ್ಯೂಸ್: ಭಾರತದ ಸಂಸತ್ತಿನ ಸದಸ್ಯರು ಖಾಸಗಿಯಾಗಿ ವಿದೇಶಗಳಿಗೆ ತೆರಳಿದ ಸಂದರ್ಭಗಳಲ್ಲಿ, ಅಲ್ಲಿನ ಆತಿಥ್ಯ ಸ್ವೀಕರಿಸುವ ಮುನ್ನ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಬೇಕು. ಹಾಗೇಯೇ ಸರ್ಕಾರದ ಕಠಿಣ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ರಾಜ್ಯಸಭಾ ಸಚಿವಾಲಯ ಆದೇಶ ಹೊರಡಿಸಿದೆ. ವಿದೇಶಗಳಿಂದ ಬರುವ ಆಹ್ವಾನವನ್ನು ಕಡ್ಡಾಯವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಗಮನಕ್ಕೆ ತರಬೇಕು ಸಂಸದರಾಗಿ ತಾವು ನಿರ್ವಹಿಸಬೇಕಿರುವ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಅಡ್ಡಿ ಉಂಟುಮಾಡಬಹುದಾದ ಉಡುಗೊರೆಗಳನ್ನು ಪಡೆಯಬಾರದು. ಸಂಸದರು ನೀತಿಸಂಹಿತೆ ಪಾಲಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ವಿದೇಶಿ ಆತಿಥ್ಯ ಸ್ವೀಕಾರ/ ಸಂಸದರಿಗೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ Read More »