ಖಾಸಗಿ ವಾಹಿನಿಯಲ್ಲಿ ಹೂಡಿಕೆ ವಿಚಾರ…ಜೈ ಹಿಂದ್ ಮಾಧ್ಯಮಕ್ಕೆ ಸಿಬಿಐ ನೋಟಿಸ್​ ಜಾರಿ

ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾನೆಲ್​ನಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ಕೋರಿ ಜೈ ಹಿಂದ್ ಮಾಧ್ಯಮಕ್ಕೆ ಸಿಬಿಐ ನೋಟಿಸ್​ ಜಾರಿ ಮಾಡಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಸಿಬಿಐ ನನಗೆ ನೋಟಿಸ್​ ಕೊಟ್ಟಿಲ್ಲ. ಯಾವ ಆಧಾರದ ಮೇಲೆ ನೋಟಿಸ್​ ಕೊಟ್ಟಿದ್ದಾರೋ ಗೊತ್ತಿಲ್ಲ. ನನಗೆ ಕಿರುಕುಳ ಕೊಡಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ. ಕೆಲ ಬಿಜೆಪಿ ನಾಯಕರಿಂದ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ಅವರು ಏನಾದರೂ ಮಾಡಲಿ, ನಾನು ಹೆದರಲ್ಲ. ನನ್ನ ಜೈಲಿಗೆ ಹಾಕುವ ಉದ್ದೇಶ ಇದ್ದರೆ ಹಾಕಲಿ. ಅವರು ಏನು ಮಾಡುತ್ತಾರೋ ಮಾಡಿಕೊಳ್ಳಲಿ. ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಜೈ ಹಿಂದ್ ಅಷ್ಟೇ ಅಲ್ಲದೆ, ಹಾಪ್ ಕಾಮ್ಸ್, ಸಬ್ ರಿಜಿಸ್ಟಾರ್​ಗಳಿಗೂ ಕೊಟ್ಟಿದ್ದಾರೆ. ಸರ್ಕಾರ ಸಿಬಿಐಗೆ ಕೊಟ್ಟ ಅನುಮತಿ ಹಿಂಪಡೆದಿದೆ. ಆದರೂ ಕೂಡ ಯಾವ ಲೆಕ್ಕಾಚಾರದಲ್ಲಿ ನೋಟಿಸ್ ಕೊಟ್ಟಿದ್ದಾರೆ ಗೊತ್ತಿಲ್ಲ. ಎಲ್ಲಾ ದಾಖಲೆಗಳು ಅವರ ಬಳಿ ಇವೆ. ಈ ಕೇಸ್​ನಲ್ಲಿ ಸರ್ಕಾರ ಅನುಮತಿ ಹಿಂಪಡೆದಿದೆ. ಇನ್ನೂ ಕಿರುಕುಳ ನೀಡುವುದಕ್ಕೆ ದೊಡ್ಡ ದೊಡ್ಡ ಜನರಿದ್ದಾರೆ ಎಂದು ಕಿಡಿಕಾರಿದ್ದಾರೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *