ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರ(ನಿರ್ವಹಣೆ: ಉದ್ಭವ ಶೈಕ್ಷಣಿಕ ಮತ್ತು ಗ್ರಾಮಾಭಿವೃದ್ಧಿ (ರಿ.) ಸಂಸ್ಥೆ ಬೆಂಗಳೂರು) ಆರೋಗ್ಯ ರಕ್ಷಾ ಸಮಿತಿ ಸಂಪಾಜೆ, ಲಯನ್ಸ್ ಕ್ಲಬ್ ಸಂಪಾಜೆ, ಗ್ರಾಮ ಪಂಚಾಯತ್ ಸಂಪಾಜೆ, ಬಾಲಂಬಿ, ಪೆರಾಜೆ, ಮದೆನಾಡು ಮತ್ತು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಆಯುಷ್ಮಾನ್ ಭವ್ ಅಭಿಯಾನದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಭಾಭವನದಲ್ಲಿ ಜ.2ರಂದು ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮಾದೇವಿ ಕಳಗಿ ವಹಿಸಿ ಎಲ್ಲಾ ಗಣ್ಯರ ಸಹಯೋಗದೊಂದಿಗೆ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕ್ಲಿನಿಕಲ್ ಸೈಕಾಲಜಿ ವಿಭಾಗದ ಡಾ| ರಮೇಶ್ ಹಾಗೂ ಸಮುದಾಯ ಶಾಸ್ತ್ರ ವಿಭಾಗ ಸಹಾಯಕ ಪ್ರದ್ಯಾಪಕರಾದ ಡಾ. ಮಹೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಉದ್ಭವ ಶೈಕ್ಷಣಿಕ ಸಂಸ್ಥೆ ಅಧ್ಯಕ್ಷ ಶಿವಾನಂದ ಮೂರ್ತಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ, ಲಯನ್ಸ್ ಕ್ಲಬ್ ಅಧ್ಯಕ್ಷ ಯೋಗೀಶ್, ಮಡಿಕೇರಿ ಎಪಿಎಂಸಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ ಚೆಂಬು, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಹರೀಶ್ ಗೌಡ ಉಪಸ್ಥಿತರಿದ್ದರು.
ಸಂಪಾಜೆ ಆರೋಗ್ಯ ಕೇಂದ್ರದ ಉಸ್ತುವಾರಿ ಆಡಳಿತಾಧಿಕಾರಿ ಪಿ.ಮಲ್ಲಿಕಾರ್ಜುನ್ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಲೀಲಾವತಿಯವರು ಪ್ರಾರ್ಥಿಸಿ ಎಲ್ಲಾ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತರು ವೈದ್ಯಕೀಯ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ತಜ್ಞರುಗಳಿಂದ ಜನರು ಪ್ರಯೋಜನ ಪಡೆದುಕೊಂಡರು.