Ad Widget .

ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ

ಸಮಗ್ರ ನ್ಯೂಸ್: ಜಪಾನ್ ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ರನ್​​​​ವೇಯಲ್ಲಿ ಚಲಿಸುತ್ತಿದ್ದ ವಿಮಾನದ ಕಿಟಕಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ ಎಂದು ದೇಶದ ಸಾರ್ವಜನಿಕ ಪ್ರಸಾರಕ ಎನ್‌ಎಚ್‌ಕೆ ತಿಳಿಸಿದೆ. ಎರಡು ವಿಮಾನ ನಡುವೆ ಡಿಕ್ಕಿಯಾಗಿದೆ. ಈ ವಿಮಾನದಲ್ಲಿ 300ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಘಟನೆಯಿಂದ 5 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Ad Widget . Ad Widget .

ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ನಿಪ್ಪಾನ್ ಟಿವಿ ವರದಿ ಮಾಡಿದೆ. ಜಪಾನ್​​​​ ವಿಮಾನ ಸಂಸ್ಥೆ ನೀಡಿದ ವರದಿ ಪ್ರಕಾರ ಈ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಸಂಶಯ ವ್ಯಕ್ತಪಡಿಸಿದೆ. ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ ಐವರು ಸಿಬ್ಬಂದಿಗಳ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *