Ad Widget .

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ

ಸಮಗ್ರ ನ್ಯೂಸ್: ಸವಣೂರು,ಜ.2, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಸವಣೂರಿನ ಅಂಬೇಡ್ಕರ್ ಭವನದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

Ad Widget . Ad Widget .

ಸಭೆಯಲ್ಲಿ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲಾಯಿತು. ಸುಳ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕರ್ತರ ಸಮಾವೇಶದ ಯಶಸ್ಸಿನ ಬಗ್ಗೆ ಅವಲೋಕನವು ಕೂಡ ನಡೆಸಲಾಯಿತು. ಹಾಗೂ ಜನವರಿ ತಿಂಗಳಲ್ಲಿ ನಡೆಯುವ ಪಕ್ಷದ ಸದಸ್ಯತ್ವ ಅಭಿಯಾನ ವನ್ನು ವಿಶೇಷ ಮುತುವರ್ಜಿ ವಹಿಸಿ ಯಶಸ್ವಿಗೊಳಿಸಲು ಸಮಿತಿಯ ಸದಸ್ಯರುಗಳಿಗೆ ಸಲಹೆಗಳನ್ನು ನೀಡಲಾಯಿತು.

Ad Widget . Ad Widget .

ಪಕ್ಷದ ಕಾರ್ಯಕರ್ತರಿಗೆ ಜವಾಬ್ದಾರಿಗಳನ್ನು ವಹಿಸಿ ಕೆಲಸ ಮಾಡಿಸುವ ಬಗ್ಗೆ ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯರಾದ ಅಶ್ರಫ್ ಟರ್ಲಿ ಅವರು ಸಲಹೆಗಳನ್ನು ನೀಡಿದರು.

ಬ್ಲಾಕ್ ಸಮಿತಿ ಗ್ರಾಮ ಸಮಿತಿ ಮತ್ತು ಬೂತ್ ಸಮಿತಿಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ಸ್ವಾಗತಿಸಿ, ಶರೀಫ್ ನಿಂತಿಕಲ್ ವಂದಿಸಿರು.

Leave a Comment

Your email address will not be published. Required fields are marked *