ಸಮಗ್ರ ನ್ಯೂಸ್: ಶಾಲೆ ಪಕ್ಕದಲ್ಲೇ ಎಸೆದಿದ್ದ ಸಿಡಿಮದ್ದಿನ ಉಂಡೆ ಮಕ್ಕಳ ಕೈಗೆ ಸಿಕ್ಕಿ ಅದರಿಂದ ದೊಡ್ಡ ದುರಂತವೇ ತಪ್ಪಿ ಹೋಗಿದೆ.
ಹೌದು ತುಮಕೂರು ಜಿಲ್ಲೆಯ ಚಿಕ್ಕನಾಯನಕನಹಳ್ಳಿ ತಾಲ್ಲೂಕಿನ ಮಾದೇನಹಳ್ಳಿಯಲ್ಲಿ ಹಂದಿ ಬೇಟೆಗೆ ಬಳಸುವ ಸಿಡಿ ಮದ್ದಿನ ಉಂಡೆಯನ್ನು ಶಾಲೆಯೊಂದರ ಪಕ್ಕದಲ್ಲಿ ಎಸೆಯಲಾಗಿತ್ತು. ಇದನ್ನು ಬಾಲ್ ಅಂತ ಭಾವಿಸಿದ್ದ ಬಾಲಕನೊಬ್ಬ ಎತ್ತಿಕೊಂಡು ಶಾಲೆಯತ್ತ ತೆರಳಿದ್ದ. ಬಳಿಕ ಆತ ಅದನ್ನು ಶ್ರೀನಿವಾಸ್ ಎಂಬ ಹುಡುಗನಿಗೆ ನೀಡಿದ್ದ. ಆ ಸ್ಫೋಟಕ ಉಂಡೆಯನ್ನು ಮನೆಗೆ ತೆಗೆದುಕೊಂಡು ಹೋಗಿದ್ದ ಶ್ರೀನಿವಾಸ್ ತಂದೆಗೆ ನೀಡಿದ್ದ. ಇದು ಯಾವುದೋ ಮಾಟ ಮಂತ್ರದ ಬಾಲ್ ಇರಬೇಕೆಂದು ಭಾವಿಸಿದ ಶ್ರೀನಿವಾಸ್ ತಂದೆ ಅದನ್ನು ದೂರಕ್ಕೆ ಎಸೆದಿದ್ದರು.
ಶ್ರೀನಿವಾಸ್ ತಂದೆ ಎಸೆದಿದ್ದ ಬಾಲ್ ಅನ್ನು ಬೀದಿನಾಯಿಯೊಂದು ಕಚ್ಚಿದ್ದು, ಅಷ್ಟರಲ್ಲಿ ಅದು ಸ್ಫೋಟಗೊಂಡಿದೆ. ಬಾಯಿ ಛಿದ್ರಗೊಂಡು ನಾಯಿ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಇನ್ನೂ ಸ್ಫೋಟಗೊಂಡಿರುವುದು ಹಂದಿ ಬೇಟೆಯಾಡಲು ಬಳಸುವ ಮದ್ದಿನ ಉಂಡೆಯಾಗಿದೆ. ಅದನ್ನು ಶಾಲೆ ಪಕ್ಕದಲ್ಲಿ ಎಸೆದರು ಯಾರು ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.