Ad Widget .

‘ಗಾಂಧಿ ಸ್ಮಾರಕ ಉದ್ಯಾನವನ’ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಭೋಸರಾಜು

ಸಮಗ್ರ ನ್ಯೂಸ್: ಮಡಿಕೇರಿಯ ಗಾಂಧಿ ಮಂಟಪದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರಪಿತ ಮಹಾತ್ಮ ‘ಗಾಂಧೀಜಿಯವರ ಸ್ಮಾರಕ ಉದ್ಯಾನವನ’ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ವೀಕ್ಷಿಸಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಜೊತೆಗೆ ಆದಷ್ಟು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

Ad Widget . Ad Widget . Ad Widget .

ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ 50 ಲಕ್ಷ ರೂ. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ ಸಹ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|ಮಂತರ್‍ಗೌಡ ಅವರು ಮಾತನಾಡಿ ಕಾಮಗಾರಿ ತ್ವರಿತವಾಗಿ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು.

ಶಾಸಕರ ಅನುದಾನದಡಿ ಸಾಧ್ಯವಾದಷ್ಟು 10 ಲಕ್ಷ ರೂ ವರೆಗೆ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಡಾ|| ಮಂತರ್ ಗೌಡ ಅವರು ಹೇಳಿದರು.

ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಅನುದಾನ ಒದಗಿಸುವುದರ ಜೊತೆಗೆ ಮತ್ತಷ್ಟು ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಬೇಕೆಂದು ಕೋರಿದರು.

ಗಾಂಧಿ ಸ್ಮಾರಕ ಉದ್ಯಾನವನವನ್ನು ರಾಜ್‍ಘಾಟ್ ಮಾದರಿಯಲ್ಲಿ ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ ಆಕರ್ಷಣೀಯ ಕೇಂದ್ರವಾಗಿ ‘ಗಾಂಧಿ ಸ್ಮಾರಕ ಉದ್ಯಾನವನ್ನು’ ಮಾದರಿಯಾಗಿ ನಿರ್ಮಿಸಬೇಕು ಎಂದು ಟಿ.ಪಿ.ರಮೇಶ್ ಅವರು ಕೋರಿದರು.

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಮಹಾತ್ಮ ಗಾಂಧಿ ಸ್ಮಾರಕ ಉದ್ಯಾನವನ ಸಂಬಂಧಿಸಿದಂತೆ ನೀಲನಕಾಶೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಸರ್ವೋದಯ ಸಮಿತಿ ಸದಸ್ಯ ಮುನೀರ್ ಅಹಮದ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಕಾರ್ಯಪ್ಪ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *