ಸಮಗ್ರ ನ್ಯೂಸ್: 1992ರ ರಾಮಜನ್ಮಭೂಮಿ ಹೋರಾಟದಲ್ಲಿ ಗಲಭೆ ಕೇಸ್ ನಲ್ಲಿ ಬಂಧಿತನಾಗಿರುವ ಕರಸೇವಕ ಶ್ರೀಕಾಂತ್ ಪೂಜಾರಿಗೆ ಇದೀಗ ಜಾಮೀನು ಸಿಕ್ಕಿದೆ. ಶ್ರೀಕಾಂತ್ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯ, ತೀರ್ಪನ್ನು ಇಂದಿಗೆ ಕಾದಿರಿಸಿತ್ತು. ಇದೀಗ ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ.
ಶ್ರೀಕಾಂತ್ ಪೂಜಾರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನು ಪಡೆದರು ಶ್ರೀಕಾಂತ್ ಪುಜಾರಿ ಬಿಡುಗಡೆ ಆಗಿಲ್ಲ. ನಾಳೆ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಆದೇಶ ಪ್ರತಿ ತಲುಪದ ಹಿನ್ನೆಲೆ ನಾಳೆ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂದು ಶ್ರೀಕಾಂತ್ ಪರ ವಕೀಲ ಸಂಜೀವ್ ಎಂ ಬಡಸ್ಕರ್ ಹೇಳಿಕೆ ನೀಡಿದ್ದಾರೆ.