Ad Widget .

ಸುಳ್ಯ: ಅಡಿಕೆಗೆ ಹಳದಿ ರೋಗ| ಮನನೊಂದು ಕೃಷಿಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

Ad Widget . Ad Widget .

ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿ ಬರದ ಹಿನ್ನಲೆಯಲ್ಲಿ ಮನೆಯವರು ಜ.4ರಂದು ರಂದು ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Ad Widget . Ad Widget .

ಇನ್ನು ಆತ್ಮಹತ್ಯೆ ಮಾಡಿಕೊಂಡ ಜಗದೀಶ್‌ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಒಂದು ವರ್ಷದಿಂದ ತೋಟಕ್ಕೆ ಹಳದಿರೋಗ ಬಂದಿದ್ದು, ಎಷ್ಟೇ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದರಿಂದಾಗಿ ಭವಿಷ್ಯದ ಬಗ್ಗೆ ಚಿಂತೆಗೀಡಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

ಇನ್ನು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *