Ad Widget .

ಬಾಲಕಿ ಕಪಾಳಕ್ಕೆ ಹೊಡೆದ KSRTC ಬಸ್ ಕಂಡಕ್ಟರ್

ಸಮಗ್ರ ನ್ಯೂಸ್: ಬಾಲಕಿಗೆ KSRTC ಬಸ್ ನಲ್ಲಿ ಕಂಡಕ್ಟರ್ ಕಪಾಳಕ್ಕೆ ಹೊಡೆದ ಘಟನೆ ಧಾರವಾಡದ ಕೆಲಗೇರಿ ಬಡಾವಣೆಯಲ್ಲಿ ನಡೆದಿದೆ.

Ad Widget . Ad Widget .

ಹಣ ಎಣಿಕೆ ಮಾಡುವಾಗ ಕಂಡಕ್ಟರ್ ನ ಬಾಲಕಿ ಟಚ್ ಮಾಡಿದ್ದಾಳೆ. ಇದರಿಂದ ಕಂಡಕ್ಟರ್ ಬಳಿ ಇದ್ದ ಹಣ ಕೆಳಗೆ ಬಿದ್ದಿದೆ ಇದರಿಂದ ಕೋಪಗೊಂಡ ಕಂಡಕ್ಟರ್ ವಿದ್ಯಾರ್ಥಿನಿಗೆ ಹೊಡೆದಿದ್ದಾರೆ.

Ad Widget . Ad Widget .

ಕಂಡಕ್ಟರ್ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಂಡಕ್ಟರ್ ವಿರುದ್ಧ ಬಾಲಕಿಯರು ಮತ್ತು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಉಪನಗರ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಕಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಂಡಕ್ಟರ್ ಸ್ಥಳಕ್ಕೆ ಬಂದು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಕೊನೆಗೂ ಕಂಡಕ್ಟರ್ ಸ್ಥಳಕ್ಕೆ ಬಂದು ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿದ ಹಿನ್ನೆಲೆ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

Leave a Comment

Your email address will not be published. Required fields are marked *