Ad Widget .

ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ/ ಹಿಂದೂ ಸಂಘಟನೆಗಳಿಗೆ ಧನ್ಯವಾದ ತಿಳಿಸಿದ ಕರಸೇವಕ

ಸಮಗ್ರ ನ್ಯೂಸ್: ಒಂದು ವಾರಗಳ ಕಾಲ ಜೈಲಿನಲ್ಲಿ ಇದ್ದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ ಪೂಜಾರಿ ಅವರಿಗೆ ನಿನ್ನೆ ಜಾಮೀನು ಲಭ್ಯವಾಗಿದ್ದು, ಇಂದು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

Ad Widget . Ad Widget .

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಕಾಂತ ಪೂಜಾರಿ, ಹುಬ್ಬಳ್ಳಿಯ ಪೊಲೀಸರು ಮಾರ್ಕೆಟ್‌ಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿ ಡಿ.29ರಂದು ನನ್ನನ್ನು ಬರಲು ಹೇಳಿದರು. ನಾನು ಬೆಳಗಾವಿಯಲ್ಲಿದ್ದವನು ಬಂದು ಪೊಲೀಸರನ್ನು ಭೇಟಿಯಾದಾಗ ಮಾರುಕಟ್ಟೆಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ನನಗೆ ಯಾವುದೇ ನೋಟಿಸ್ ಅಥವಾ ಸಮನ್ಸ್ ಕೂಡ ನೀಡದೇ ಅರೆಸ್ಟ್ ಮಾಡಿದ್ದಾರೆ ಎಂದು ಹೇಳಿದರು.

Ad Widget . Ad Widget .

ನನ್ನ ಮೇಲೆ ಯಾವುದೇ ಕೇಸ್‌ಗಳಿಲ್ಲ ಎಂದು ಹೇಳಿದರೂ ನನ್ನನ್ನು ಬಂಧಿಸಿದ್ದಾರೆ. ನನ್ನ ಮೇಲಿರುವ ಎಲ್ಲ ಕೇಸ್‌ಗಳು ಖುಲಾಸೆ ಮಾಡಿಕೊಂಡೇ ನಾನು ಜೈಲಿನಿಂದ ಹೊರಗಿದ್ದೇನೆ. ಆದರೆ, ಈ ಕೇಸನ್ನು ಮುಂದಿಟ್ಟುಕೊಂಡು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಾನು ಜೈಲಿಗೆ ಹೋದ ನಂತರ ಬಿಜೆಪಿ ನಾಯಕರು, ಮುಖಂಡರು, ಹಿಂದೂ ಸಂಘನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡಿ ಬಿಡುಗಡೆಗೆ ಆಗ್ರಹಿಸಿದ್ದಾರೆ. ಅವರೆಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಇನ್ನು ಜ.22ರಂದು ನಡೆಯುವ ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೂ ನಾನು ಹೋಗುತ್ತೇನೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *