ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ನಿಗಮಕ್ಕೆ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದ್ದು, ಅದರಲ್ಲಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲೂ 10 ರೂ. ನಾಣ್ಯ ಪಡೆಯುವಂತೆ ಗಳಲ್ಲೂ 10 ರೂ. ನಾಣ್ಯ ಪಡೆಯುವಂತೆ ಆದೇಶಿಸಲಾಗಿದೆ
ಇಷ್ಟು ದಿನ 10 ರೂ. ನಾಣ್ಯ ಕೊಟ್ಟರೆ ಕಂಡಕ್ಟರ್‌ಗಳು ತೆಗೆದುಕೊಳ್ಳದೇ, ಇದು ಹೋಗಲ್ಲ ನೋಟು ಕೊಡಿ ಎಂದು ಹೇಳುತ್ತಿದ್ದರು. ಹೀಗಾಗಿ 10 ರೂಪಾಯಿ ನಾಣ್ಯದ ಬಗ್ಗೆ ನಿರ್ಲಕ್ಷ್ಯ
ವಹಿಸಿದ ಹಿನ್ನೆಲೆಯಲ್ಲಿ ತಿಳುವಳಿಕೆ ಪತ್ರದ ಮೂಲಕ ಸಾರಿಗೆ ಇಲಾಖೆಯ ಕಾರ್ಯದರ್ಶಿಯು ಎಲ್ಲಾ ನಿಗಮಗಳಿಗೂ ವಾರ್ನಿಂಗ್ ಮಾಡಿದ್ದಾರೆ.
ಬಸ್ ಪ್ರಯಾಣದ ವೇಳೆ ಪ್ರಯಾಣಿಕರು 10 ರೂ. ನಾಣ್ಯ (10 Rs Coin) ನೀಡಿದರೆ ಪಡೆಯಬೇಕು. ಒಂದು ವೇಳೆ 10 ರೂ. ನಾಣ್ಯ ಪಡೆಯದೇ ಇದ್ದರೆ, ಈ ಬಗ್ಗೆ ಪ್ರಯಾಣಿಕರಿಂದ ದೂರು ಬಂದರೆ ಆ ಬಸ್ಸಿನ ನಿರ್ವಾಹಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ರವಾನಿಸಿದೆ.