Ad Widget .

Boycott ಮಾಲ್ಡೀವ್ಸ್… ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಲೇವಡಿ ಮಾಡಿದ ಮಾಲ್ಡೀವ್ಸ್​ ಸಚಿವ

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಕೊಟ್ಟಿದ್ದ ಪೋಟೋ ವೈರಲ್ ಆಗಿತ್ತು ಈ ಕುರಿತು ಲೇವಡಿ ಮಾಡಿದ್ದ ಮಾಲ್ಡೀವ್ಸ್​ ಸಚಿವರಿಗೆ ಭಾರತೀಯರು ತಿರುಗೇಟು ನೀಡಿದ್ದಾರೆ. ಪ್ರವಾಸೋದ್ಯಮವನ್ನೇ ನಂಬಿ ಕುಳಿತಿರುವ ಮಾಲ್ಡೀವ್ಸ್​ ಇದರಿಂದ ಸಾಕಷ್ಟು ಪ್ರವಾಸಿಗರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

Ad Widget . Ad Widget .

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳ ನಡುವಿನ ಹೋಲಿಕೆಗಳು ಪ್ರಾರಂಭವಾದವು.

Ad Widget . Ad Widget .

ಮಾಲ್ಡೀವ್ಸ್​ ಸಚಿವ ಅಬ್ದುಲ್ಲಾ ಮೊಹ್ಜುಮ್ ಮಜೀಸ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಮಾಲ್ಡೀವ್ಸ್​ ಹಾಗೂ ಭಾರತದ ಪ್ರವಾಸೋದ್ಯಮಕ್ಕೆ ಹೋಲಿಕೆ ಮಾಡಿದ್ದಾರೆ, ಭಾರತಕ್ಕಿಂತ ಅಲ್ಲಿ ರೆಸಾರ್ಟ್​ನಿಂದ ಹಿಡಿದು ಎಲ್ಲಾ ಮೂಲಸೌಕರ್ಯಗಳು ಹೆಚ್ಚು ಎಂದು ಬರೆದುಕೊಂಡಿದ್ದಾರೆ.

ಮಾಲ್ಡೀವ್ಸ್​ನ ಮತ್ತೊಬ್ಬ ನಾಯಕ ಜಾಹಿದ್ ರಮೀಜ್ ಪೋಸ್ಟ್​ ಮಾಡಿದ್ದು, ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುವ ಬಗ್ಗೆ ಮಾತನಾಡಿದ್ದು, ಖಂಡಿತವಾಗಿಯೂ ಮೋದಿಯವರದ್ದು ಉತ್ತಮ ಹೆಜ್ಜೆ, ಆದರೆ ನಮ್ಮೊಂದಿಗೆ ಸ್ಪರ್ಧಿಸುವುದು ಭ್ರಮೆ. ನಮ್ಮಂತಹ ಸೇವೆಯನ್ನು ಒದಗಿಸುವುದು ಸಾಧ್ಯವೇ ಎಂದು ಬರೆದಿದ್ದಾರೆ. ಈ ಹೇಳಿಕೆಯಿಂದಾಗಿ ಇದೀಗ ಎಕ್ಸ್​ನಲ್ಲಿ Boycott Maldives ಹ್ಯಾಶ್​ಟ್ಯಾಗ್​ನಲ್ಲಿ ಅಭಿಯಾನ ಶುರುವಾಗಿದೆ. ಪ್ರವಾಸೋದ್ಯಮವನ್ನು ಅವಲಂಬಿಸಿರುವ ಮಾಲ್ಡೀವ್ಸ್‌ಗೆ ಭಾರತದ ಶಕ್ತಿಯ ಬಗ್ಗೆ ತಿಳಿದಿಲ್ಲ ಎಂದು ಭಾರತೀಯರು ಹೇಳುತ್ತಿದ್ದಾರೆ. ಮಾಲ್ಡೀವ್ಸ್ ಪ್ರವಾಸವನ್ನು ರದ್ದುಗೊಳಿಸಿದ ನಂತರ ಲಕ್ಷದ್ವೀಪಕ್ಕೆ ಆದ್ಯತೆ ನೀಡುವವರು ಅನೇಕರಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಮಾಲ್ಡೀವ್ಸ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿರುವ ರೀತಿ ನೋಡಿದರೆ ಮಾಲ್ಡೀವ್ಸ್ ಗೆ ಶಾಕ್ ಆಗುವುದು ಖಚಿತ. ಹೆಚ್ಚು ಜನ ಮಾಲ್ಡೀವ್ಸ್‌ಗೆ ಪ್ರವಾಸ ಇಟ್ಟುಕೊಂಡಿದ್ದನು ರದ್ದು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್​ ಸೇರಿದಂತೆ ಹಲವರು ಮಾಲ್ಡೀವ್ಸ್​ಗೆ ತೆರಳದೆ ಭಾರತದ ದ್ವೀಪಗಳಿಗೆ ತೆರಳಲು ಸಲಹೆ ನೀಡಿದ್ದಾರೆ.

Leave a Comment

Your email address will not be published. Required fields are marked *