ಸಮಗ್ರ ನ್ಯೂಸ್: ರಾಷ್ಟ್ರೀಯ ಬಾಲಕಿಯರ ಹಾಕಿ ಪಂದ್ಯಾಟದ ಸಮಾರೋಪ ಸಮಾರಂಭಕ್ಕೆ ಆಗಮಿಸುವ ರಾಜ್ಯ ಶಿಕ್ಷಣ ಸಚಿವ ಎಸ್. ಮದು ಬಂಗಾರಪ್ಪನವರು ನಾಳೆ ಬೆಳಿಗ್ಗೆ (ಜ.8) ಪೊನ್ನಂಪೇಟೆಯ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕರಿಂದ ಶಿಕ್ಷಣ ಇಲಾಖೆ ಸಂಬಂಧಿಸಿದಂತೆ ಅಹ್ವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಶಿಕ್ಷಣ ಇಲಾಖೆಗೆ ಸಂಬಂಧಿಸಿದ ದೂರು ಹಾಗೂ ಸಮಸ್ಯೆಗಳಿದ್ದರೆ ಸಚಿವರನ್ನು ನಾಳೆ ಭೇಟಿಯಾಗಬಹುದಾಗಿದೆ. ಮಧ್ಯಾಹ್ನ 2 ಗಂಟೆಗೆ ಸಚಿವರು ಹಾಕಿ ಟೂರ್ನಿ ಮೈದಾನದಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.







