ಪೊನ್ನಂಪೇಟೆ:ಹಾಕಿ ಟರ್ಫ್ ಮೈದಾನದಲ್ಲಿ ಜ. 8ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ

ಸಮಗ್ರ ನ್ಯೂಸ್: ರಾಷ್ಟ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ ಮಟ್ಟದ ಹಾಕಿ ಪಂದ್ಯಾವಳಿಯ 3ನೇ ಸ್ಥಾನ ಮತ್ತು 4ನೇ ಸ್ಥಾನಕ್ಕೆ ಬೆಳಿಗ್ಗೆ 11 ಗಂಟೆಗೆ ಪಂದ್ಯ ನಡೆಯಲಿದೆ.

Ad Widget ... ..

ಸಭಾ ಕಾರ್ಯಕ್ರಮ 2 ಗಂಟೆಗೆ ನಡೆಯಲಿದೆ. ಮದ್ಯಾಹ್ನ 2.20ಕ್ಕೆ ಫೈನಲ್ ಪಂದ್ಯ ನಡೆಯಲಿದೆ. ನಂತರ ಪ್ರಶಸ್ತಿ ವಿತರಣೆ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಎಸ್.ಮಧು ಬಂಗಾರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ|ಮಂತರ್ ಗೌಡ, ಕರ್ನಾಟಕ ವಿಧಾನ ಪರಿಷತ್ ಶಾಸಕ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷ ಎಚ್.ವಿ.ಗಿರಿಜಾ ಇತರರು ಪಾಲ್ಗೊಳ್ಳಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯ ನಿರ್ದೇಶಕ ಬಿ.ಎಸ್.ರಘುವೀರ್, ಜಂಟಿ ನಿರ್ದೇಶಕ(ದೈಹಿಕ ಶಿಕ್ಷಣ) ಎಸ್.ಎನ್.ರಮೇಶ್, ಮೈಸೂರು ವಿಭಾಗದ ಶಾಲಾ ಶಿಕ್ಷಣ ಇಲಾಖೆ ವಿಭಾಗೀಯ ಕಾರ್ಯದರ್ಶಿ ಹಾಗೂ ಸಹ ನಿರ್ದೇಶಕ ಪಾಂಡುರಂಗ, ಮೈಸೂರು ಸಿಟಿಇ ಪ್ರಾಂಶುಪಾಲರು ಹಾಗೂ ಸಹ ನಿರ್ದೇಶಕಿ ಗೀತಾಂಭ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಚಂದ್ರಕಾಂತ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.

Ad Widget

Leave a Comment

Your email address will not be published. Required fields are marked *