Ad Widget .

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ

ಸಮಗ್ರ ನ್ಯೂಸ್: ಟೀಂ ಇಂಡಿಯಾ ವೇಗದ ಬೌಲರ್‌ ಮೊಹಮ್ಮದ್ ಶಮಿ, ಕ್ರಿಕೆಟ್‌ನಲ್ಲಿ ದೇಶಕ್ಕೆ ಹೆಮ್ಮೆ ಪಡುವಂತ ಸಾಧನೆ ಮಾಡಿದ್ದಕ್ಕಾಗಿ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದರು. ಇದೀಗ ಶಮಿ ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Ad Widget . Ad Widget .

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ್ದ ಮೊಹಮ್ಮದ್ ಶಮಿ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿತ್ತು.

Ad Widget . Ad Widget .

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊಹಮ್ಮದ್ ಶಮಿ ಕೇವಲ 7 ಪಂದ್ಯಗಳನ್ನಾಡಿ 24 ವಿಕೆಟ್ ಕಬಳಿಸುವ ಮೂಲಕ ತಂಡ ಫೈನಲ್‌ಗೇರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಆದರೆ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಆಸ್ಟ್ರೇಲಿಯಾಗೆ ಶರಣಾಗುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

2023ರ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ 4 ಪಂದ್ಯಗಳಲ್ಲಿ ಮೊಹಮ್ಮದ್ ಶಮಿ ಬೆಂಚ್ ಕಾಯಿಸಿದ್ದರು. ಇನ್ನು ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರಿಂದಾಗಿ ನ್ಯೂಜಿಲೆಂಡ್ ಎದುರಿನ ಪಂದ್ಯದ ವೇಳೆ ಶಮಿಗೆ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿತ್ತು. ಕಿವೀಸ್ ಎದುರು ತಾನಾಡಿದ ಮೊದಲ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ್ದ ಶಮಿ ಆ ಬಳಿಕ ಹಿಂತಿರುಗಿ ನೋಡುವ ಪ್ರಶ್ನೆಯೇ ಬರಲಿಲ್ಲ. ಶಮಿ ಟೂರ್ನಿಯಲ್ಲಿ 24 ವಿಕೆಟ್ ಕಬಳಿಸುವ ಮೂಲಕ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು.

Leave a Comment

Your email address will not be published. Required fields are marked *