ಸಮಗ್ರ ನ್ಯೂಸ್: ಬೆಂಗಳೂರು ನಗರದಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆ 4 ದಿನಗಳ ಕಾಲ ಬಂದ್ ಆಗಲಿದೆ. ಜನವರಿ 16ರ ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11ವರೆಗೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪೀಣ್ಯ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧಿಸಿದೆ. ಒಟ್ಟು ನಾಲ್ಕು ದಿನ ಫ್ಲೈಓವರ್ ಬಂದ್ ಆಗುವುದರಿಂದ ಸರ್ವಿಸ್ ರಸ್ತೆ ಬಳಸುವಂತೆ ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.
ಪರ್ಯಾಯ ಮಾರ್ಗವನ್ನು ಸೂಚಿಸಿದ್ದು ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಪಕ್ಕದ ಎನ್ ಹೆಚ್-4 ಮತ್ತು ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ-ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಎಸ್ ಆರ್ ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದು.
ಸಿಎಂಟಿಐ ಜಂಕ್ಷನ್ ನಿಂದ ನೆಲಮಂಗಲ ಕಡೆಗೆ ಫ್ಲೈ ಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈ ಓವರ್ ಪಕ್ಕದ ಎನ್ ಹೆಚ್-4 ಮತ್ತು ಸರ್ವಿಸ್ ರಸ್ತೆಯಲ್ಲಿ SRS ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚರಿಸಲು ಅನುವು ಮಾಡಿಕೊಡಲಾಗಿದೆ.