ಸಮಗ್ರ ಉದ್ಯೋಗ: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು.
ವಿದ್ಯಾರ್ಹತೆ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 58,000-67,700
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳನ್ನು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.
ಇ-ಮೇಲ್ ಕಳುಹಿಸಲು ಕೊನೆಯ ದಿನ: ಜನವರಿ 19, 2024. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಜನವರಿ 19, 2024ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ.