Ad Widget .

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನ! ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Bharat Electronics Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 81 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 12, 2024 ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿ ಇತರೆ ರಾಜ್ಯಗಳಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

ಹುದ್ದೆಯ ಮಾಹಿತಿ:
ಗ್ರಾಜುಯೇಟ್ ಅಪ್ರೆಂಟಿಸ್- 63
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್-10
ಬಿ.ಕಾಂ ಅಪ್ರೆಂಟಿಸ್- 8

Ad Widget . Ad Widget .

ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್- ಎಂಜಿನಿಯರಿಂಗ್ ಪದವಿ
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್-ಡಿಪ್ಲೊಮಾ
ಬಿ.ಕಾಂ ಅಪ್ರೆಂಟಿಸ್- ಬಿ.ಕಾಂ

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು

ವೇತನ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 10,500-17,500 ರೂ. ಸಂಬಳ ಕೊಡಲಾಗುತ್ತದೆ.

ಗ್ರಾಜುಯೇಟ್ ಅಪ್ರೆಂಟಿಸ್- ಮಾಸಿಕ ₹ 17,500
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್- ಮಾಸಿಕ ₹ 12,500
ಬಿ.ಕಾಂ ಅಪ್ರೆಂಟಿಸ್- ಮಾಸಿಕ ₹ 10,500

ಉದ್ಯೋಗದ ಸ್ಥಳ:

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಮಿಳುನಾಡು, ಕರ್ನಾಟಕ, ಆಂಧ್ರ ಪ್ರದೇಶ, ಕೇರಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ನಂದಂಬಕ್ಕಂ
ಚೆನ್ನೈ – 600089

Leave a Comment

Your email address will not be published. Required fields are marked *