ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿರುವ ಸುಪ್ರೀಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಜಾಫರ್ ಇನ್ಸಾಲ್ ಖಾನ್ ಎಂಬವರು ಮತ್ತು ಅವಾಮಿ ನ್ಯಾಷನಲ್ ಕಾನ್ಸರನ್ಸ್‍ನಿಂದ ಎರಡು ಪ್ರತ್ಯೇಕ ಮರು ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿದೆ.
ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019ರ ನಿರ್ಧಾರವನ್ನು, ಡಿಸೆಂಬರ್ 11, 2023 ರಂದು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠವು ಸರ್ವಾನುಮತದಿಂದ ಎತ್ತಿಹಿಡಿದಿತ್ತು. ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ದಾರಿ ಮಾಡಿಕೊಟ್ಟ 2019ರ ಕಾನೂನಿನ ಸಿಂಧುತ್ವವನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಈ ಪ್ರದೇಶಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸಲು ಸೂಚಿಸಿತ್ತು.