Ad Widget .

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ/ ಇದೇ 21ರಂದು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಕರ್ನಾಟಕದ 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದ್ದು, ಇದರ ಪೂರ್ವ ಸಿದ್ಧತೆಗಾಗಿ ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿದೆ. ಇದರೊಂದಿಗೆ ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದೆ.

Ad Widget . Ad Widget .

ಜನವರಿ 21ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Ad Widget . Ad Widget .

ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ ಸಮಾವೇಶ ನಡೆಸಲಾಗುತ್ತಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರನ್ನು ಒಗ್ಗೂಡಿಸಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ರಾಜ್ಯ ಮಟ್ಟದ ಸಮಾವೇಶದಲ್ಲಿ ಸಚಿವರು, ಕಾಂಗ್ರೆಸ್ ಶಾಸಕರು, ಸಂಸದರು, ಡಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು ಭಾಗಿಯಾಗಲಿದ್ದಾರೆ.

Leave a Comment

Your email address will not be published. Required fields are marked *