Ad Widget .

ಇಂದು ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ

ಸಮಗ್ರ ನ್ಯೂಸ್: ಇಂದು ಸ್ವಾಮಿ ವಿವೇಕಾನಂದರ ಜನ್ಮ ದಿನ (ಜನವರಿ 12) ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತಿದೆ. ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ.

Ad Widget . Ad Widget .

ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡುವ ಸಮಾರಂಭಕ್ಕೆ ಶಿವಮೊಗ್ಗದ ಫ್ರೀಡಂ ಪಾರ್ಕ್​ನ ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ಸಜ್ಜಾಗಿದ್ದು, 85 ಸಾವಿರಕ್ಕೂ ಹೆಚ್ಚು ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.

Ad Widget . Ad Widget .

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಮೂರು ದಿನಗಳಿಂದ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಹಾಗೂ ಕಾರ್ಯಕ್ರಮದ ರೂವಾರಿ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು, ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳಿನ್ನು ಮಾಡಿಸುತ್ತಿದ್ದಾರೆ. ಹಾಗೇ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ಬಸ್​ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇನ್ನೂ ನೋಂದಣಿ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್‍ಎಸ್‍ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್​ನಲ್ಲಿ ಸಲ್ಲಿಸಬಹುದಾಗಿದೆ.

Leave a Comment

Your email address will not be published. Required fields are marked *