ಯುವನಿಧಿಗೆ ಇಂದು ಚಾಲನೆ/ ಶಿವಮೊಗ್ಗದಲ್ಲಿ ವೇದಿಕೆ ಸಜ್ಜು

ಸಮಗ್ರ ನ್ಯೂಸ್: ಪದವಿ ಅಥವಾ ಡಿಪ್ಲೋಮಾ ಪೂರೈಸಿ ಉದ್ಯೋಗದ ಹುಡುಕಾಟದಲ್ಲಿರುವ ಯುವಜನರಿಗಾಗಿ ಸರ್ಕಾರ ಘೋಷಿಸಿರುವ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದಲ್ಲಿ ಚಾಲನೆ ದೊರಕಲಿದೆ.

Ad Widget ... ..

ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಬೃಹತ್ ವೇದಿಕೆ ಸಜ್ಜುಗೊಂಡಿದೆ. ನಿರುದ್ಯೋಗಿಗಳ ಖಾತೆಗೆ ಹಣ ವರ್ಗಾಯಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪ್ರಮುಖ ಸಚಿವರು ಪಾಲ್ಗೊಳ್ಳಲಿದ್ದಾರೆ.

Ad Widget

ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾವೇರಿ, ಗದಗ ಮತ್ತು ಉಡುಪಿ ಮತ್ತಿತರ ಜಿಲ್ಲೆಗಳಿಂದ 1 ಲಕ್ಷಕ್ಕೂ ಅಧಿಕ ಸಂಖ್ಯೆಯ ಯುವಜನರು ಹಾಗೂ ಕಾರ್ಯಕರ್ತರನ್ನು ಕರೆತರಲು ಘಟಕರು ಮುಂದಾಗಿದ್ದಾರೆ. ಹೊರ ಜಿಲ್ಲೆಗಳಿಂದ ಬರುವವರಿಗಾಗಿ 1000 ಬಸ್‍ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಊಟೋಪಹಾರ ಇದೆ.

Leave a Comment

Your email address will not be published. Required fields are marked *