ದಳಪತಿಗಳಿಗೆ ಜಾಕ್ ಪಾಟ್| ಜ.17ರಂದು ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹಾಗೂ ಜೆಡಿಎಸ್​ ನಡುವೆ ಮೈತ್ರಿ ಏರ್ಪಟ್ಟಿದೆ. ಇದರ ಫಲವಾಗಿ ದಳಪತಿಗೆ ದೊಡ್ಡ ಜಾಕ್​ಪಾಟ್ ಹೊಡೆದಿದೆ.

Ad Widget ... ..

ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.

Ad Widget

ಇದೇ ಜನವರಿ 17ರಂದು ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಪದಗ್ರಹಣ ಮಾಡಲಿದ್ದಾರೆ ಎಂದು ವರದಿಯಾಗಿದೆ. ಕೃಷಿ ಖಾತೆ ಅಥವಾ ಜಲಸಂಪನ್ಮೂಲ ಖಾತೆ ನೀಡಲು ಬಿಜೆಪಿ ಹೈಕಮಾಂಡ್ ಭರವಸೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಜನವರಿ 15 ಅಥವಾ 16ರಂದು ಕುಮಾರಸ್ವಾಮಿಯವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ವರಿಷ್ಠರು ಈ ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *