ಸಮಗ್ರ ಉದ್ಯೋಗ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್/ಮೆಕ್ಯಾನಿಕಲ್/ಕೆಮಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್/ಇನ್ಸ್ಟ್ರುಮೆಂಟೇಶನ್/ಕಂಪ್ಯೂಟರ್ ಸೈನ್ಸ್/ಐಟಿ/ಪೆಟ್ರೋಲಿಯಂ ಎಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 3, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ-NC ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹ 25,000
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://jobs.hpcl.co.in/Recruit_New/recruitlogin.jsp online apply
ಸರ್ಕಾರಿ ನೌಕರಿಯ ಹುಡುಕಾಟದಲ್ಲಿದ್ದರೆ ಈಗಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.