Ad Widget .

ಐಎನ್‍ಡಿಐಎ ಮೈತ್ರಿಕೂಟದ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕ

ಸಮಗ್ರ ನ್ಯೂಸ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಐಎನ್‍ಡಿಐಎ ಮೈತ್ರಿಕೂಟದ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಐಎನ್‍ಡಿಐಎ ಮೈತ್ರಿಕೂಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೈತ್ರಿಕೂಟದ ಮುಖ್ಯಸ್ತರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ನಿತೀಶ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

ದೆಹಲಿಯಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಮೈತ್ರಿಕೂಟದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಮೈತ್ರಿಕೂಟದ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕಕ್ಕೆ ಕೂಡ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ.

Ad Widget . Ad Widget .

14 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಈ ಸಭೆಗೆ ಗೈರಾಗಿದ್ದರು.

Leave a Comment

Your email address will not be published. Required fields are marked *