ಸಮಗ್ರ ನ್ಯೂಸ್: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಹೈದ್ರಾಬಾದ್ ನಲ್ಲಿ ಈ ಜಾಲ ಪತ್ತೆಯಾಗಿದ್ದು. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದು ನಕಲಿ ಉತ್ಪನ್ನ, ಪ್ಯಾಕಿಂಗ್ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಾಗ್ರಿಗಳು ಪತ್ತೆಯಾಗಿವೆ. ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಸಚಿವ ಎಂ.ಬಿ. ಪಾಟೀಲ್ಗೆ ಅನಾಮಧೇಯ ಕರೆ ಬಂದಿದೆ. ಆ ಮೂಲಕ ಕಾರ್ಖಾನೆ ಎಂಡಿ ಡಾ. ಪ್ರಶಾಂತ್ಗೆ ನಿಗಾ ವಹಿಸಲು ಸೂಚಿಸಿದ್ದಾರೆ. ಕಾರ್ಯಪ್ರವೃತ್ತರಾಗಿದ್ದ ಸಿಕಂದರಾಬಾದಿನಲ್ಲಿರುವ ಕೆಎಸ್ಡಿಎಲ್ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟ ಕಂಡುಬಂದಿದೆ. ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್ಡಿಎಲ್ ಸಿಬ್ಬಂದಿ ಮುಂದಾಗಿದ್ದರು.
ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಕೆಎಸ್ಡಿಎಲ್ ಸಿಬ್ಬಂದಿ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಈ ಪತ್ತೆ ಜಾಲವನ್ನು ಕಂಡುಹಿಡಿದಿದ್ದಾರೆ.