ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ| 6 ಕ್ಕೂ‌ ಹೆಚ್ಚು ಮಂದಿ ಬಂಧನ

ಸಮಗ್ರ ನ್ಯೂಸ್: ವೇಶ್ಯಾವಾಟಿಕೆ ನಡೆಸುತ್ತಿದ್ದ ಹೊಸಪೇಟೆಯ ಲಾಡ್ಜ್ ಮೇಲೆ ದಾಳಿ ನಡೆದಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ವಿಜಯನಗರದ ಹೊಸಪೇಟೆಯ ರಾಣಿಪೇಟ್‍ನಲ್ಲಿ ಒಡನಾಡಿ ಸಂಸ್ಥೆ ಮತ್ತು ಹೊಸಪೇಟೆ ಪಟ್ಟಣ ಪೊಲೀಸರಿಂದ ಜಂಟಿ ದಾಳಿ ನಡೆದಿದೆ.

Ad Widget ... ..

ಲಾಡ್ಜ್ ನ ನೆಲಮಹಡಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಈ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಪೊಲೀಸರ ತಂಡ ಲಾಡ್ಜ್ ಮೇಲೆ ದಾಳಿ ಮಾಡಿದೆ. ಈ ವೇಳೆ ಲಾಡ್ಜ್ ನಲ್ಲಿದ್ದ 6ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಯಿತು. ಬಳಿಕ ದಂಧೆಯಲ್ಲಿ ತೊಡಗಿದ ಸಂತ್ರಸ್ತ ಮಹಿಳೆಯರ ರಕ್ಷಣೆ ಮಾಡಲಾಗಿದೆ.

Ad Widget

ಕೂಡ್ಲಿಗಿ ಮೂಲದ ಓರ್ವ ಮಹಿಳೆ, ಕೋಲ್ಕತ್ತಾದ ಇಬ್ಬರು ಮಹಿಳೆಯರು ಹಾಗೂ ಆಂಧ್ರ ಪ್ರದೇಶ ಮೂಲದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಕೋಲ್ಕತ್ತಾ ಪುರುಷರು ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *