Ad Widget .

ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಘೋಷಿಸಿರುವ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ಜ. 21ರಂದು ಕಾಂಗ್ರೆಸ್‌ನ ಎಲ್ಲಾ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳನ್ನು ಸೇರಿಸುವ ಬೃಹತ್ ಸಮಾವೇಶ ಜ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಹೇಳಿದರು.

Ad Widget . Ad Widget .

ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಜ. 12ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ನಾಯಕರು ಪಾಲ್ಗೊಳ್ಳಲಿದ್ದಾರೆ. ಸುಳ್ಯ ಬ್ಲಾಕ್‌ನಿಂದಲೂ ಕಾಂಗ್ರೆಸ್ ನಾಯಕರು, ಜನ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಜ.15ರಂದು ಸುಳ್ಯದಲ್ಲಿ ಸಭೆ ನಡೆಯಲಿದೆ ಎಂದರು.

Ad Widget . Ad Widget .

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡರು, ಕ್ಯಾಂಪ್ಕೋ ಸಂಸ್ಥೆ ವ್ಯಾಪಾರ ಮನೋಭಾವಣೆಯಿಂದ ಹೊರಬಂದು ಕೃಷಿಕರ ರಕ್ಷಣೆ ಮಾಡುವಲ್ಲಿ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಎನ್. ಜಯಪ್ರಕಾಶ್ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧ‌ರ್ ಮತ್ತು ಪಕ್ಷದ ಪ್ರಮುಖರಾದ ಕೆ.ಗೋಕುಲ್‌ ದಾಸ್, ಸತ್ಯ ಕುಮಾರ್ ಆಡಿಂಜ, ನಂದರಾಜ್ ಸಂಕೇಶ, ಭವಾನಿ ಶಂಕರ ಕಲ್ಮಡ್ಕ ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *