ಮಡಿಕೇರಿ: ಪಿಕಪ್, ಆಟೋ ನಡುವೆ ಭೀಕರ ಅಪಘಾತ| ಆಟೋ ಚಾಲಕನ ಗಂಭೀರ

ಸಮಗ್ರ ನ್ಯೂಸ್: ಪಿಕಪ್ ವಾಹನ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಚಿಂತಾಜನಕ ಸ್ಥಿತಿಗೆ ತಲುಪಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

Ad Widget ... ..

ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕನೋರ್ವ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರ ಗಾಯಗಳಾಗಿದ್ದ ಆಟೋ ಚಾಲಕ ಸುನೀಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಅಪಘಾತ ಸಂಭವಿಸಿದ್ದು, ತಕ್ಷಣವೇ ಪಿಕಪ್ ವಾಹನದ ಚಾಲಕ ಗಾಳಿಬೀಡಿನ ಮೋಕ್ಷಿತ್ ಎಂಬಾತನನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಮೆಜಾನ್ ನಲ್ಲಿ ವ್ಯಾಪಾರ ಮಾಡುತ್ತಿರುವ ಮೋಕ್ಷಿತ್ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ.

Leave a Comment

Your email address will not be published. Required fields are marked *