ಬಳ್ಳಾರಿಯ ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ|ಓರ್ವ ಸಾವು

ಸಮಗ್ರ ನ್ಯೂಸ್: ಇತ್ತೀಚೆಗೆ ಬೆಂಕಿ ಅವಘಡಗಳು ದಿನ ಸುದ್ದಿಯಲ್ಲಿ ಇರುತ್ತದೆ. ಈಗ ಬಳ್ಳಾರಿಯ ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

Ad Widget ... ..

ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು. ಸಲೀಂ ಮೃತ ದುರ್ದೈವಿಯಾಗಿದ್ದಾರೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು, ಈ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

Ad Widget

ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರು ಭರತ್ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಳ್ಳಲು ಕಾರಣ ತಿಳಿದುಬಂದಿಲ್ಲ. ತನಿಖೆ ನಂತರವಷ್ಟೇ ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದು ಬರಲಿದೆ.

Leave a Comment

Your email address will not be published. Required fields are marked *