Ad Widget .

ಕಡಬ: ಜ.15ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಪೂರ್ವಬಾವಿ ಸಭೆ

ಸಮಗ್ರ ನ್ಯೂಸ್: ಜ. 21ರಂದು ರಾಷ್ಟ್ರಿಯ ಕಾಂಗ್ರೆಸ್ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳೂರಿಗೆ ಭೇಟಿ ನೀಡುವವರಿದ್ದು. ಇದರ ಕುರಿತು ಜ. 15ರಂದು ಸಂಜೆ 3ಗಂಟೆಗೆ ಸರಿಯಾಗಿ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

Ad Widget . Ad Widget .

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು, ಮಾಜಿ ಸಚಿವ ರಮನಾಥ ರೈ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸುಳ್ಯ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಮಮತಾ ಗಟ್ಟಿಯವರು ಹಾಗೂ ಡಿಸಿಸಿ ಉಸ್ತುವಾರಿಗಳು ಭಾಗವಹಿಸಲಿದ್ದಾರೆ.

Ad Widget . Ad Widget .

ಸಭೆಯಲ್ಲಿ ಕೆಪಿಸಿಸಿ ಪಧಾದಿಕಾರಿಗಳು ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಪಧಾದಿಕಾರಿಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಮಾಜಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಸದಸ್ಯರುಗಳು, ಗ್ರಾಮ ಪಂಚಾಯತಿ ಅಧ್ಯಕ್ಷರುಗಳು ಹಾಗು ಸದಸ್ಯರುಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ಹಾಗೂ ಪಕ್ಷದ ಎಲ್ಲಾ ಮುಖಂಡರುಗಳು ತಪ್ಪದೇ ಹಾಜರಾಗಬೇಕು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಭೂಮಿಕ ಸತೀಶ್ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *