Ad Widget .

ಈ ಹುದ್ದೆಗೆ ಅಪ್ಲೈ ಮಾಡಿ! ತಿಂಗಳಿಗೆ 31,000 ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಜನವರಿ 16, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್​​ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ ಬಿ.ಟೆಕ್, ಗಿಯೋಟೆಕ್ನಿಕಲ್ ಎಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಥವಾ ಓಷನ್ ಎಂಜಿನಿಯರಿಂಗ್ ಅಥವಾ ಮೆರೈನ್ ಸ್ಟ್ರಕ್ಚರ್ಸ್​​ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 31,000

ಉದ್ಯೋಗದ ಸ್ಥಳ:
ಸುರತ್ಕಲ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಡಾ.ಬಬ್ಲೂ ಚೌಧರಿ
ಸಹಾಯಕ ಪ್ರಾಧ್ಯಾಪಕರು
ಸಿವಿಲ್ ಎಂಜಿನಿಯರಿಂಗ್ ವಿಭಾಗ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ)
ಸುರತ್ಕಲ್
ಪಿ.ಒ. ಶ್ರೀನಿವಾಸನಗರ
ಮಂಗಳೂರು – 575025
ಕರ್ನಾಟಕ
ಭಾರತ

Leave a Comment

Your email address will not be published. Required fields are marked *