ಸಮಗ್ರ ಉದ್ಯೋಗ: KUBFED Recruitment 2024: ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಡೆಪ್ಯುಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಎಂಸಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 40,900-78,200
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 2,000 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕರ್ನಾಟಕ ರಾಜ್ಯ ಸಹಕಾರ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್
ನಂ. 132
ಕೆ.ಎಚ್. ರಸ್ತೆ
ಬೆಂಗಳೂರು-560027
ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.