ಸಮಗ್ರ ನ್ಯೂಸ್:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದರು, ಇದೀಗ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿ 50 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರ ಚಲನವಲನಗಳ ಮೇಲೆ ಅನುಮಾನ ಮೂಡಿದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ತಪಾಸಣೆ ನಡೆಸಿದ್ದಾರೆ. ಈ ವೇಳೆ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಲಾಗಿತ್ತು. ಒಬ್ಬ ಪ್ರಯಾಣಿಕ ಚಿನ್ನದ ಪೇಸ್ಟ್ ಅನ್ನು ಕ್ಯಾಪ್ಸೂಲ್ಗಳಲ್ಲಿ ತುಂಬಿಸಿ ಗುದದ್ವಾರದಲ್ಲಿಟ್ಟು ಸಾಗಿಸುತ್ತಿದ್ದನು. ಮತ್ತೊಬ್ಬ ಪ್ರಯಾಣಿಕ ಚಾಕಲೇಟ್ ಬಾಕ್ಸ್ನಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದನು. ಒಟ್ಟು ಇಬ್ಬರು ಪ್ರಯಾಣಿಕರಿಂದ 50.93 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ, ಅಬುಧಾಬಿಯಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದನು. ಪ್ರಯಾಣಿಕನ ಅನುಮಾನಾಸ್ಪದ ಚಲನವಲನಗಳ ಮೇಲೆ ಅನುಮಾನ ವ್ಯಕ್ತವಾದ ಹಿನ್ನೆಲೆ ಪ್ರಯಾಣಿಕನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಚಿನ್ನ ಪತ್ತೆಯಾಗಿದೆ.