ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ/ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹೇಳಿದ್ದಾರೆ.

Ad Widget ... ..

ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಮತ್ತು ಕರ್ನಾಟಕ ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವಿಫಲರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ ಅಧಿಕಾರಿಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Ad Widget

ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಇದನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡಬೇಕು ಎಂದು ಹೇಳಿದರು.

Leave a Comment

Your email address will not be published. Required fields are marked *