ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿಗೆ ಭೇಟಿ/ ಅದ್ಧೂರಿ ಸ್ವಾಗತಕ್ಕೆ ಸಜ್ಜಾದ ರಾಜ್ಯ ಬಿಜೆಪಿ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಇದೇ ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದು ಈ ವೇಳೆ ಮೋದಿ ಸ್ವಾಗತಕ್ಕೆ ಕಾರ್ಯಕರ್ತರಿಗೆ ಅವಕಾಶ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ದೇಶಿಸಿ ಪ್ರಮುಖರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನಿ ಮೋದಿ ಅವರು ಲೋಕಸಭೆ ಚುನಾವಣೆಗೂ ಮುನ್ನ ರೋಡ್ ಶೋ ನಡೆಸುವ ಆಲೋಚನೆ ಇದ್ದು, ಪ್ರಧಾನಿ ಕಾರ್ಯಾಲಯದ ಒಪ್ಪಿಗೆಗಾಗಿ ಕಾಯಲಾಗಿದೆ.

Ad Widget ... ..

ಪ್ರಧಾನಿ ಭೇಟಿಯಿಂದಾಗಿ 19ರಂದು ನಡೆಯಬೇಕಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *