ಸಿಎಂ-ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್| ಯುವಕನ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಮಂಗಳೂರಿನ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ad Widget ... ..

ಬಿಜೆಪಿ ಎಲ್ ಕಾರ್ಡ್ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆರಂಭದಲ್ಲಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಲಾಗಿದೆ. ಇನ್ನೂ ಸುರತ್ಕಲ್ ಮೂಲದ ಯುವಕ ಈ ವಿಡಿಯೋ ಮಾಡಿದ್ದು ಎನ್ನಲಾಗುತ್ತಿದೆ

Ad Widget

ಈ ಬಗ್ಗೆ ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ಪೊಲೀಸ್ ಆಯುಕ್ತ ಅವರಿಗೆ ದೂರು ನೀಡಿದ್ದು, ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ದೂರು ಸ್ವೀಕರಿಸಿದ್ದಾರೆ. ಸದ್ಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Comment

Your email address will not be published. Required fields are marked *