ಸಮಗ್ರ ಉದ್ಯೋಗ: Electronics Corporation of India Limited ECIL ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1100 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ. ಜನವರಿ 17, 2024 ಅಂದರೆ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ವಿದ್ಯಾರ್ಹತೆ:
ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್)- 275
ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಿಷಿಯನ್)- 275
ಜೂನಿಯರ್ ಟೆಕ್ನಿಷಿಯನ್ (ಫಿಟ್ಟರ್)- 550
ವಿದ್ಯಾರ್ಹತೆ:
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕ್/ ಎಲೆಕ್ಟ್ರಿಷಿಯನ್/ ಫಿಟ್ಟರ್ ವಿಭಾಗದಲ್ಲಿ ITI ಪೂರ್ಣಗೊಳಿಸಿರಬೇಕು.
ವಯೋಮಿತಿ:
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 16, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ವೇತನ:
ಮಾಸಿಕ ₹ 22,528
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ದಾಖಲಾತಿ ಪರಿಶೀಲನೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://www.ecil.co.in/job_details_01_2024.phpapply here
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.