ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಕೆ.ಎಲ್.ರಾಹುಲ್ ಭೇಟಿ

ಸಮಗ್ರ ನ್ಯೂಸ್:ಜ.17, ಕ್ರಿಕೆಟಿಗ ಮಂಗಳೂರು ಮೂಲದ ಕೆ.ಎಲ್. ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.

Ad Widget ... ..

ಕ್ಷೇತ್ರಕ್ಕೆ ಭೇಟಿ ನೀಡಿದ ಕೆ.ಎಲ್.ರಾಹುಲ್ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಗೌರವಿಸಲಾಯಿತು. ಸ್ನೇಹಿತರ ಜೊತೆಗೆ ಕೆ.ಎಲ್.ರಾಹುಲ್ ಕುಕ್ಕೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿಗಳು, ದೇವಳದವರು, ಸ್ನೇಹಿತರು ಜತೆಗಿದ್ದರು. ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.

Ad Widget

Leave a Comment

Your email address will not be published. Required fields are marked *