Ad Widget .

ಮೃತರ ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಿಸಿದ ಯಶ್ ಆಪ್ತರು

ಸಮಗ್ರ ನ್ಯೂಸ್: ಇತ್ತೀಚೆಗೆ ನಟ ಯಶ್​ ಅವರ ಜನ್ಮದಿನದ ಹಿನ್ನಲೆ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಅಭಿಮಾನಿಗಳಾದ ಮುರಳಿ, ನವೀನ್, ಹನುಮಂತ ನಿಧನರಾಗಿದ್ದರು. ಇವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದ್ದು, ಯಶ್​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್​ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಲಾಗಿದೆ. ಯಶೋಮಾರ್ಗ ಟ್ರಸ್ಟ್ ನಿಂದ ಯಶ್​ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದೆ.

Ad Widget . Ad Widget .

ಯಶ್​ ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಪ್ರತಿ ವರ್ಷ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಅದೇ ರೀತಿ ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಅಭಿಮಾನಿಗಳು ಈ ಬಾರಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾಗ ದುರ್ಘಟನೆ ನಡೆಯಿತು. ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ತಗುಲಿದ್ದರಿಂದ ಮುರಳಿ, ನವೀನ್​ ಮತ್ತು ಹನುಮಂತ ಮೃತರಾದರು. ಅಭಿಮಾನಿಗಳ ಸಾವಿನ ಸುದ್ದಿ ತಿಳಿದು ಯಶ್​ ಅವರು ಕಂಬನಿ ಮಿಡಿದರು. ಮರುದಿನ ಅವರು ಸೊರಣಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಮೃತರ ಮನೆಗಳಿಗೆ ತೆರಳಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಈ ವೇಳೆ ಅವರಿಗೆ ಪರಿಹಾರ ಹಣದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ತಮ್ಮ ಕೈಲಾದ ಸಹಾಯ ಮಾಡುವುದಾಗಿ ಯಶ್​ ತಿಳಿಸಿದ್ದರು. ಈಗ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೀಡಿರುವುದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *