Ad Widget .

ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ| ಮಾರ್ಗಸೂಚಿ ರಿಲೀಸ್

ಸಮಗ್ರ ನ್ಯೂಸ್: PSI ಪರೀಕ್ಷೆ ಇದೇ ಜನವರಿ 23 ರಂದು 545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಪರೀಕ್ಷೆ ಮಾರ್ಗಸೂಚಿ ಇದೀಗ ಬಿಡುಗಡೆ ಮಾಡಿದೆ.

Ad Widget . Ad Widget .

ಮಾರ್ಗಸೂಚಿ ಈ ರೀತಿಯಾಗಿದೆ:

Ad Widget . Ad Widget .
  • ಶರ್ಟ್/ಪ್ಯಾಂಟ್ ಗಳಿಗೆ ಜಿಪ್ ಪ್ಯಾಕೆಟ್ ಗಳು, ದೊಡ್ಡ ದೊಡ್ಡ ಗುಂಡಿಗಳು, ಎಕ್ಸ್ಟ್ರಾ ಡಿಸೈನ್ ಇರಬಾರದು.
  • ಪರೀಕ್ಷಾ ಹಾಲ್ ಗೆ ಶೂ ಹಾಕಿಕೊಂಡು ಹೋಗುವುದನ್ನು ನಿಷೇಧಿಸಲಾಗಿದ್ದು, ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ ನೀಡಲಾಗಿದೆ.
    *ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸಬಾರದು.
    *ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರ ಹಾಲ್ ಗೆ ಪ್ರವೇಶವಿಲ್ಲ.
    *ಯಾವುದೇ ರೀತಿಯಾದ ಅಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯಲು ನೀರಿನ ವ್ಯವಸ್ಥೆ ಇರುತ್ತದೆ.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ.
  • ಎಲ್ಲಾ ಅಭ್ಯರ್ಥಿಗಳಿಗೆ ಹ್ಯಾಟ್, ಮಾಸ್ಕ್ ಧರಿಸದಂತೆ ಸೂಚನೆ.
    *ಪ್ರವೇಶ ಪತ್ರ ಕಡ್ಡಾಯವಾಗಿ ತರಬೇಕು.
  • ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯ.
  • ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್​ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ.

ಇನ್ನೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಇದೆ
*ಮಹಿಳಾ ಅಭ್ಯರ್ಥಿಗಳು ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ.

  • ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ
    ಮುಜುಗರವಾಗದಂತೆ ಅರ್ಧ ತೋಳಿನ‌ ಬಟ್ಟೆ ಬಳಸಬೇಕು
    *ಇನ್ನೊಬ್ಬರಿಗೆ ಮುಜುಗರವಾಗದಂತೆ ಟಾಪ್ ಗಳು ಬಳಸಲು ಸೂಚನೆ.
    *ಹೈ ಹೀಲ್ಸ್ ಚಪ್ಪಲಿ-ಶೂ ನಿಷೇಧ.
    *ಮಹಿಳಾ ಅಭ್ಯರ್ಥಿಗಳಿಗೂ ಕೂಡ ಯಾವುದೇ ರೀತಿಯ ಲೋಹ, ಚೈನ್ ಬಳಸದಂತೆ ಸೂಚನೆ.
    ಆದರೆ ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ ನೀಡಲಾಗಿದೆ.

Leave a Comment

Your email address will not be published. Required fields are marked *